ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು

Crime Logo
Published on

ಮೈಸೂರು: ನಗರದ ಬಂಬೂಬಜಾರ್‌ನ ಮೇದರ ಬ್ಲಾಕಿನ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು 1.50 ಲಕ್ಷ ರೂ.ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.

ಮೇದರ್ ಬ್ಲಾಕ್ ನಿವಾಸಿ ಉಮೇಶ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಉಮೇಶ್ ಅವರು ಕುಟುಂಬ ಸಮೇತ ಜೂ.11ರಂದು ತಿರುಪತಿಗೆ ತೆರಳಿದ್ದರು. ಜೂ.15ರಂದು ಬೆಳಗ್ಗೆ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಬೀರುವಿನಲ್ಲಿದ್ದ 1.50 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ಕಳ್ಳತನವಾಗಿದೆ ಎಂದು ಮನೆ ಮಾಲೀಕರು ನೀಡಿದ ದೂರಿನ ಮೇರೆಗೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net