ಟ್ಯಾಂಕರ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು

Published on

ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್(53) ಎಂಬುವರು ಮೃತಪಟ್ಟಿದ್ದಾರೆ.

ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾಗಿರುವ ಕಿಶೋರ್ ಕುಮಾರ್ ಗುರುವಾರ ಬೆಂಗಳೂರಿನಿಂದ ಮಂಗಳೂರಿನತ್ತ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪಿಸುತ್ತಿದ್ದಂತೆಯೇ ಹೃದಯಾಘಾತಕ್ಕೀಡಾದರು. ಕೂಡಲೇ ಟ್ಯಾಂಕರ್‌ನಲ್ಲಿದ್ದ ಸಹ ಚಾಲಕ ಟ್ಯಾಂಕರ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರಾದರೂ ಅದಾಗಲೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net