ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Lorry Accident
Published on

ಹೊನ್ನಾವರ: ಪಟ್ಟಣದ ರಾಮತೀರ್ಥದ ಸಮೀಪ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿದ ಸರಕು ತುಂಬಿದ ಲಾರಿ ಪಲ್ಟಿಯಾಗಿದೆ. ಕುಮಟಾದಿಂದ ಹೊನ್ನಾವರ ಮಾರ್ಗವಾಗಿ ಹೋಗುತ್ತಿದ್ದ ವಾಹನ ಅಪಘಾತಕ್ಕಿಡಾಗಿದೆ. ಲಾರಿಯಲ್ಲಿ ಸಿಮೆಂಟ್ ಸಾಗಾಟ ಮಾಡಲಾಗುತ್ತಿತ್ತು. ರಾಮತೀರ್ಥ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಇಳಿದಿದೆ. ಕ್ರೇನ್ ಮೂಲಕ ಲಾರಿ ಮೇಲೆತ್ತಲಾಯಿತು. ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net