ವಿದ್ಯುತ್​ ಕಂಬಕ್ಕೆ ಡಿಕ್ಕಿಯಾಗಿ ಕಾರು ನುಜ್ಜುಗುಜ್ಜು: ಸ್ಥಳದಲ್ಲೇ ಬಾಲಕಿ ಸಾವು, ಚಾಲಕನ ಸ್ಥಿತಿ ಗಂಭೀರ

Accident
Published on

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಬಾಲಕಿ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ರೋಷಿಣಿ( 14 ) ಮೃತಪಟ್ಟ ಬಾಲಕಿ. ಘಟನೆಯಲ್ಲಿ ಗಾಯಗೊಂಡಿರುವ ಏಳು ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಹೊಸಪೇಟೆಯ ಸಿರಿಸಿನಕಲ್ಲು ಪ್ರದೇಶದಿಂದ ಬಳ್ಳಾರಿಗೆ ಹೊರಟಿದ್ದರು. ಈ ವೇಳೆ ಮಾರ್ಗಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ವಿದ್ಯಿತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದಿರುವ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಹೊಸಪೇಟೆಯ ಪ್ರಕಾಶ್ ಮೇಹರವಾಡೆ ಎಂಬುವವರು ತಮ್ಮ ಖಾಸಗಿ ಕಾರಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net