ಶಾಲೆ ಅಭಿವೃದ್ಧಿಯಲ್ಲಿ ಹಳೇ ವಿದ್ಯಾರ್ಥಿಗಳ ಶ್ರಮ ಅಗತ್ಯ

Gokul Shetty Uppunda
ಜಿ.ಗೋಕುಲ್ ಶೆಟ್ಟಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು.
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ನಮ್ಮೂರ ಶಾಲೆ ನಮ್ಮ ಹೆಮ್ಮೆಯಾಗಿದೆ. ನಾವು ಕಲಿತ ಶಾಲೆ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಬೇಕು. ಶಾಲೆಯನ್ನು ಇನ್ನಷ್ಟು ಅಭಿವೃದ್ಧಿ ಮಾಡುವಲ್ಲಿ ಸದಾ ಶ್ರಮಿಸಬೇಕು ಎಂದು ಬವಳಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉದ್ಯಮಿ ಜಿ.ಗೋಕುಲ್ ಶೆಟ್ಟಿ ಉಪ್ಪುಂದ ಹೇಳಿದರು.

ಬವಳಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ 75,000 ರೂ. ಮೌಲ್ಯದ ಶಾಲಾ ಸಮವಸ್ತ್ರ ಗಳನ್ನು ವಿತರಿಸಿ ಮಾತನಾಡಿದರು.

ಈ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ. ಅವರು ಶಾಲೆ ಅಭಿವೃದ್ಧಿಗೆ ಸ್ಪಂದಿಸಬೇಕು. ಆಗ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತದೆ. ಶಾಲೆಯ ಹಳೇ ವಿದ್ಯಾರ್ಥಿಗಳು, ಪಾಲಕರು, ಎಸ್‌ಡಿಎಂಸಿ ಹಾಗೂ ಶಿಕ್ಷಣಾಭಿಮಾನಿಗಳ ಸಹಕಾರ ನೀಡಿದರೆ ತಾಲೂಕಿನಲ್ಲಿ ಮಾದರಿ ಶಾಲೆಯಾಗಿ ಮಾಡುವಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ವಿದ್ಯಾರ್ಥಿಗಳು ದಾನಿ ಜಿ.ಗೋಕುಲ್ ಶೆಟ್ಟಿ ಅವರನ್ನು ಸನ್ಮಾನಿಸಿ, ಅಭಿನಂದಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಗಾಣಿಗ, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಮುಖ್ಯಶಿಕ್ಷಕ ಎನ್.ಕೆ.ಬಿಲ್ಲವ ಸ್ವಾಗತಿಸಿದರು. ಸಹಶಿಕ್ಷಕಕರಾದ ಸುನೀಲ್ ಕುಮಾರ್ ನಾಯ್ಕ ನಿರೂಪಿಸಿದರು, ಶೇಖರ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net