ಮತಗಟ್ಟೆಗಳಿಗೆ ತೆರಳಿದ ಚುನಾವಣೆ ಸಿಬ್ಬಂದಿ

02-06-Shiva-2
ರಾಯಚೂರಿನ ತಹಸೀಲ್ ಕಚೇರಿಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಮತಗಟ್ಟೆಗೆ ತೆರಳುವ ಮುಂಚೆ ಭಾನುವಾರ ಮತಪತ್ರ ಹಾಗೂ ಸಾಮಗ್ರಿಗಳನ್ನು ಪರಿಶೀಲಿಸಿಕೊಳ್ಳುತ್ತಿರುವುದು.
Published on

ರಾಯಚೂರು: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದ್ದು, ಸ್ಥಳೀಯ ತಹಸೀಲ್ದಾರ್ ಕಚೇರಿಯಿಂದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡ ರೈತರು ಭಾನುವಾರ ಮಧ್ಯಾಹ್ನ ಚುನಾವಣೆ ಸಾಮಗ್ರಿಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು.
ಜಿಲ್ಲೆಯಲ್ಲಿ ಒಟ್ಟು 30 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಆಯಾ ತಾಲೂಕಿನ ತಹಸೀಲ್ ಕಾರ್ಯಾಲಯದಿಂದ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದರು. ಸೋಮವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 4ರವರೆಗೆ ಮತದಾನ ಪ್ರಕ್ರಿಯೆ ಜರುಗಲಿದೆ.
ರಾಯಚೂರು ತಾಲೂಕಿನ 7 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ನಗರದಲ್ಲಿ 5 ಮತ್ತು ಗ್ರಾಮೀಣ ಪ್ರದೇಶದಲ್ಲಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಗರದ ತಹಸೀಲ್ ಕಚೇರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಬಾಲಕರ ಸರ್ಕಾರಿ ಪಿಯು ಕಾಲೇಜು, ಕರ್ನಾಟಕ ಸಂಘ, ತಾಲೂಕಿನ ಯರಗೇರಾ, ಶಕ್ತಿನಗರದಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಜಿಲ್ಲೆಯಲ್ಲಿ 4,175 ಪುರುಷ, 2,703 ಮಹಿಳಾ ಮತದಾರರು, ಐವರು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 6,891 ಮತದಾರರಿದ್ದು, ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net