

ಬಜಪೆ :ಸಮೀಪ ಅಂತೋನಿಕಟ್ಟೆ ಎಂಬಲ್ಲಿ ಮೋಲಿಬಾಯಿ ಎಂಬವರ ಮನೆ ಮೇಲೆ ಆವರಣಗೋಡೆ ಕುಸಿದು ಬಿದ್ದು ಮನೆಗೆ ಹಾನಿ ಉಂಟಾಗಿದೆ. ಮಂಗಳೂರು ತಹಸೀಲ್ದಾರ್ ಪ್ರಶಾಂತ್ ಪಾಟೀಲ್, ಬಜಪೆ ಪ.ಪಂ. ಮುಖ್ಯಾಧಿಕಾರಿ ಪಕೀರ ಮೂಲ್ಯ ಮತ್ತು ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆಮಂದಿಯನ್ನು ಸ್ಥಳಾಂತರಕ್ಕೆ ಸೂಚನೆ ನೀಡಿದ್ದು, ಮನೆ ಮಂದಿ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ.