ಅಭಿವೃದ್ಧಿ ಸಹಿಸದೇ ಕೆಲವರ ಅಸೂಯೆ

 ಕೆ.ಎಂ.ದೊಡ್ಡಿ ಸಮೀಪದ ಯಡಗನಹಳ್ಳಿಯಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕದಲೂರು ಉದಯ್ ಚಾಲನೆ ನೀಡಿದರು.
ಕೆ.ಎಂ.ದೊಡ್ಡಿ ಸಮೀಪದ ಯಡಗನಹಳ್ಳಿಯಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕದಲೂರು ಉದಯ್ ಚಾಲನೆ ನೀಡಿದರು.
Published on

ಕೆ.ಎಂ.ದೊಡ್ಡಿ: ನಾನು ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿದ್ದು ಅದನ್ನು ಸಹಿಸದೇ ಕೆಲವರು ಅಸೂಯೆ ಪಡುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಹೇಳಿದರು.

ಸಮೀಪದ ಯಡಗನಹಳ್ಳಿ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು 22 ಕೋಟಿ ರೂ. ವೆಚ್ಚದಲ್ಲಿ ಲೋಕಸರ ಶಾಖಾ ನಾಲೆಯ ಕಟ್ ಅಂಡ್ ಕವರ್, ಆರ್‌ಸಿಸಿ ಟ್ರಫ್ ಮತ್ತು ಅಡ್ಡ ಮೋರಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಚುನಾವಣೆ ಪೂರ್ವದಿಂದಲೂ ನನ್ನ ಬಗ್ಗೆ ಪೂರ್ವಗ್ರಹ ಪೀಡಿತರಾಗಿ ಕೆಲವರು ಅಪಪ್ರಚಾರ ಮಾಡುತ್ತಿದ್ದರು. ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಮೂಲಕ ಅವರಿಗೆ ತಕ್ಕ ತಿರುಗೇಟು ನೀಡಿದ್ದೇನೆ ಎಂದರು.

ಮದ್ದೂರು ಕ್ಷೇತ್ರದಲ್ಲಿ ಕಳೆದ 20 ವರ್ಷಗಳ ಅವಧಿಗಳಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಹಾಗೂ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರಕಾರದಿಂದ ಹೆಚ್ಚಿನ ಅನುದಾನಗಳನ್ನು ತಂದು ಕ್ಷೇತ್ರವನ್ನು ಹೊಸ ಆಯಾಮದೊಂದಿಗೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಕಾಡುಕೊತ್ತನಹಳ್ಳಿ, ಯಡಗನಹಳ್ಳಿ ,ಕೆ.ಶೆಟ್ಟಹಳ್ಳಿ ಹಾಗೂ ಮಾದರಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇನ್ನುಳಿದಂತೆ ಗ್ರಾಮೀಣ ಭಾಗದ ಹಲವು ರಸ್ತೆ ಕಾಮಗಾರಿಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ವಿಶೇಷ ಅನುದಾನಗಳನ್ನು ತಂದು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

ಜಿ.ಪಂ ಮಾಜಿ ಅಧ್ಯಕ್ಷ ಬಿ.ಬಸವರಾಜು ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ರಾಜೀವ್ ಕಾರ್ಯಪಾಲಕ ಅಭಿಯಂತರ ನಂಜುಡೇಗೌಡ, ಭಾರತಿನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್ ,ಮುಖಂಡರಾದ ಕೆಂಚೆಗೌಡ , ಪುಟ್ಟೇಗೌಡ, ಪುಟ್ಟಣ, ಮಾದೇಗೌಡ, ಎಸ್. ಕೆಂಚೆಗೌಡ, ಚನ್ನಬಸವೇಗೌಡ, ಮಾದೇಗೌಡ, ಗೌಡಪ್ಪ, ಕರಡಕೆರೆ ಮನು, ರವಿಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net