ಪಂಚೇಂದ್ರಿಯಗಳಲ್ಲಿ ಕಣ್ಣು ಅತಿ ಸೂಕ್ಷ್ಮ

gan-5
Published on

ಗಂಗೊಳ್ಳಿ: ಪಂಚೇಂದ್ರಿಯಗಳಲ್ಲಿ ಕಣ್ಣು ಅತಿ ಸೂಕ್ಷ್ಮವಾದುದು. ಅದರ ಆರೋಗ್ಯ, ಆರೈಕೆಗೆ ವಿಶೇಷ ಗಮನ ನೀಡಬೇಕು ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಗಣೇಶ ಭಟ್ಟ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಧನಾ ಸಮಾಜಸೇವಾ ವೇದಿಕೆ, ಶಿರೂರು ಮುದ್ದುಮನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಸಂಯುಕ್ತವಾಗಿ ಸಾಧನಾ ಸಮುದಾಯ ಭವನದಲ್ಲಿ ಭಾನುವಾರ ನೇತ್ರ ತಪಾಸಣೆ, ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾಧನಾ ಅಧ್ಯಕ್ಷ ಪುಟ್ಟ ಎಂ.ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್‌ನ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಡಾ.ಮನೋಜ್ ಭಟ್, ಆಡಳಿತಾಧಿಕಾರಿ ಯು.ಶಂಕರ ಶೆಟ್ಟಿ ತಮ್ಮ ಆಸ್ಪತ್ರೆಯಲ್ಲಿ ಸಿಗುವ ಉಚಿತ ಸೇವೆ ಬಗ್ಗೆ ವಿವರಿಸಿದರು. ಈ ಶಿಬಿರದಲ್ಲಿ ಪರೀಕ್ಷೆಗೆ ಒಳಗಾಗಿ ಕನ್ನಡಕ ಬಳಕೆಗೆ ಸೂಚಿಸಲ್ಪಟ್ಟವರಿಗೆ ಜಿಪಂ ಯೋಜನೆಯಡಿ ಉಚಿತವಾಗಿ ಕನ್ನಡಕ ನೀಡಲಾಗುವುದು ಎಂದು ಡಾ.ಗಣೇಶ ಭಟ್ಟ ಪ್ರಕಟಿಸಿದರು. ಶಿಬಿರ ಸಂಯೋಜಕ ನಾಗೇಶ್ ಎಸ್.ರಾವ್ ಸ್ವಾಗತಿಸಿದರು. ದೇವಿದಾಸ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ಕೇಂದ್ರ ಸಿಬ್ಬಂದಿ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net