ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ
Published on

ಸೋಮವಾರಪೇಟೆ: ಪಟ್ಟಣದಲ್ಲಿರುವ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಭಾನುವಾರ ಚಾಲನೆ ನೀಡಲಾಯಿತು.

ಬೆಳಗ್ಗೆ 5.30ಕ್ಕೆ ದೇವಾಲಯದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ತಾಂತ್ರಿಕತ್ವದಲ್ಲಿ ಶ್ರೀಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಗಣಪತಿ ಹೋಮ ಜರುಗಿತು. ನಂತರ ಅಧ್ಯಕ್ಷ ವಿನೋದ್‌ಕುಮಾರ್ ಧ್ವಜಾರೋಹಣವನ್ನು ನೆರವೇರಿಸುವುದರೊಂದಿಗೆ ಜಾತ್ರಾ ಮಹೋತ್ಸವ ಆರಂಭಗೊಂಡಿತು. ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿ ಕೃಷ್ಣಕುಮಾರ್ ನೇತೃತ್ವದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ನೆರವೇರಿತು.

ಶ್ರೀಮುತ್ತಪ್ಪನ್ ದೇವಾಲಯದ ಮಡೆಯನ್ ಸುಧೀಶ್ ಕುಮಾರ್, ದೇವಾಲಯ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net