

ಗೋಕಾಕ: ಗ್ರಾಮ ದೇವತೆಯರ ಜಾತ್ರೆ ಸಮೀಪಿಸುತ್ತಿದ್ದು, ನಗರಸಭೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದು ಜಾತ್ರಾ ಕಮಿಟಿ ಅಧ್ಯ ರಮೇಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಹತ್ತು ವರ್ಷಗಳ ನಂತರ ನಡೆಯುತ್ತಿರುವ ಈ ಜಾತ್ರೆ ವಿಶೇಷವಾಗಿರಲಿದೆ. ದೇವತೆಯರ ಗುಡಿಗಳು ನವೀಕರಣಗೊಂಡು ಕಂಗೊಳಿಸುತ್ತಿವೆ. ಜನತೆ ಜಾತ್ರೆ ಅದ್ದೂರಿಯಾಗಿ ಆಚರಿಸುವ ಉತ್ಸಾಹದಲ್ಲಿದ್ದಾರೆ. ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಸೌಲಭ್ಯ ಕಲ್ಪಿಸಿ ಭಕ್ತರ ಸಂಭ್ರಮ ಹೆಚ್ಚಿಸಬೇಕು ಎಂದರು.
ರಥೋತ್ಸವ ಮುಗಿದ ನಂತರ ಭಂಡಾರ ಆಡುವಂತಿಲ್ಲ. ಭಂಡಾರದಲ್ಲಿ ಕೆಮಿಕಲ್ ಮಿಶ್ರಣ ಮಾಡಿದರೆ ಅಂಗಡಿಕಾರರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜಾತ್ರೆಗೆ ಲಾಂತರ ಜನ ಸೇರುವ ನಿರೀೆಯಿದ್ದು, ನಗರಸಭೆಯವರು ಶೌಚಗೃಹಗಳಿಗೆ ಹೆಚ್ಚಿನ ಮಹತ್ವ ನೀಡಿ, ಸಮರ್ಪಕವಾಗಿ ನಿರ್ವಹಣೆ ಮಾಡಲು ಹೆಚ್ಚಿನ ಸಿಬ್ಬಂದಿ ನಿಯೋಜಿಸಬೇಕು ಎಂದು ಸೂಚಿಸಿದರು.
ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಕಾರ್ಯನಿರ್ವಹಿಸಬೇಕು. ಪೋಲಿಸ್ ಇಲಾಖೆಯ ಸಹಕಾರದೊಂದಿಗೆ ನಗರದಲ್ಲಿ ಸಿಸಿ ಕ್ಯಾಮರಾ, ಪಾರ್ಕಿಂಗ್ ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ಅಗತ್ಯ ಸಿದ್ಧತೆ ಮಾಡಬೇಕು. ಪೊಲೀಸ್ ಇಲಾಖೆ ಯಾವುದೇ ಅಹಿತಕರ ಟನೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಜಾತ್ರಾ ಸಮಯದಲ್ಲಿ ಹೆಸ್ಕಾಂ ವಿದ್ಯುತ್ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು. ಎಲ್ಲರೂ ಪರಸ್ಪರ ಸಹಕಾರದಿಂದ ಜಾತ್ರಾ ಮಹೋತ್ಸವ ಆಚರಿಸಿ ದೇವಿ ಅನುಗ್ರಹಕ್ಕೆ ಪಾತ್ರರಾಗೋಣವೆಂದು ತಿಳಿಸಿದರು. ತಹಸೀಲ್ದಾರ್ ಡಾ.ಮೋಹನ ಭಸ್ಮೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಸ್ತೆ, ನಗರಸಭೆ ಪೌರಾಯುಕ್ತ ರಮೇಶ ಜಾಧವ, ಪೊಲೀಸ್ ಅಧಿಕಾರಿಗಳು ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.