

ಬೆಳ್ತಂಗಡಿ: ಎಸ್.ಡಿ.ಎಂ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುವರ್ಣ ಸಂಭ್ರಮಾಚರಣೆ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳು ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಪತ್ರಕರ್ತರ ಸಂಘ ಬೆಳ್ತಂಗಡಿ, ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬೆಳ್ತಂಗಡಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಭಾನುವಾರ ನಡೆಯಿತು.
ಸಿರಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕ ಕೆ.ಎಂ.ಜನಾರ್ದನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದರಿಂದ ವ್ಯಕ್ತಿಯ ಜೀವ ಉಳಿಸಿದ ಭಾವನೆ ಜತೆಯಲ್ಲಿ ದಾನಿಯ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ, ಜೀವ ಉಳಿಸಲು ನಾವು ವೈದ್ಯರಾಗಬೇಕಿಲ್ಲ. ರಕ್ತದಾನ ಮಾಡಿದರೆ ಸಾಕು ಎಂದರು.
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಯೋಜನಾಧಿಕಾರಿ ಸುರೇಂದ್ರ, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ ಉಪಸ್ಥಿತರಿದ್ದರು.
ಉದ್ಯಮಿ ಅನಿಲ್ ಕುಮಾರ್ ಶಿಬಾಜೆ, ದಿನೇಶ್ ಕೋಟ್ಯಾನ್, ರಾಘವೇಂದ್ರ ನಿಡಿಗಲ್, ರಾಮಕೃಷ್ಣ ರೈ, ಯಶೋಧರ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಶ್ರೀಧರ್ ಕೆ.ವಿ ವಂದಿಸಿದರು. ತಿಮ್ಮಯ್ಯ ನಾಯ್ಕ ಮತ್ತು ಸಮೀಕ್ಷಾ ಶಿರ್ಲಾಲು ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಎಚ್, ದೀಪಾ ಆರ್.ಪಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸಿದರು.