ಸಂಭ್ರಮದ ಕರಡಿಗುಡ್ಡ ಶ್ರೀ ಮಲ್ಲಿಕಾರ್ಜುನ ರಥೋತ್ಸವ

KARADIGUDDA
Published on

ಉಪ್ಪಿನಬೆಟಗೇರಿ: ಹರಹರ ಮಹಾದೇವ... ಶ್ರೀ ಮಲ್ಲಿಕಾರ್ಜುನ ಮಹಾರಾಜಕೀ ಜೈ ಎಂಬ ಜಯಘೋಷದೊಂದಿಗೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವರ ರಥೋತ್ಸವ ಅಪಾರ ಭಕ್ತರ ಮಧ್ಯ ಸೋಮವಾರ ವಿಜೃಂಭಣೆಯಿಂದ ಜರುಗಿತು.

ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ, ಲಿಂಬೆಹಣ್ಣುಗಳನ್ನು ಎಸೆದು ಭಕ್ತಿ ಸಮರ್ಪಿಸಿದರು. ಭಜನೆ, ಜಾಂಜ್ ಸೇರಿದಂತೆ ವಿವಿಧ ವಾದ್ಯ ಮೇಳಗಳು ರಥೋತ್ಸವಕ್ಕೆ ಮೆರಗು ತಂದವು. ಜಾತ್ರೆಯ ಅಂಗವಾಗಿ ಬೆಳಗ್ಗೆ ಶ್ರೀ ಮಲ್ಲಿಕಾರ್ಜುನ ದೇವರಿಗೆ ಅರ್ಚಕರಿಂದ ಮಹಾರುದ್ರಾಭಿಷೇಕ, ವಿಶೇಷ ಎಲೆ ಪೂಜೆ ನೆರವೇರಿಸಲಾಯಿತು. ಭಕ್ತರಿಗೆ ಮಹಾಪ್ರಸಾದ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಮಠಾಧೀಶರು, ಗ್ರಾಮಸ್ಥರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net