ಗಣ್ಯರಿಂದ ಪಾರ್ಥೀವ ಶರೀರದ ಅಂತಿಮ ನಮನ

s
Published on

ಹಿರಿಯ ರಾಜಕೀಯ ಮುತ್ಸದಿ, ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ನಿಧನಕ್ಕೆ ಮಠಾಧೀಶರು, ರಾಜಕೀಯ ನಾಯಕರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಪ್ರಸಾದ್ ಅವರ ನಿಧನ ಹಿನ್ನೆಲೆಯಲ್ಲಿ ಜಯಲಕ್ಷ್ಮಿಪುರಂನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ಹಲವು ಗಣ್ಯರು, ಅಗಲಿದ ಹಿರಿಯ ರಾಜಕೀಯ ನಾಯಕನ ಪಾರ್ಥೀವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು. ಬಳಿಕ ಅಶೋಕ್‌ಪುರಂನ ಎನ್‌ಟಿಎಂ ಶಾಲಾ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ಹಾಗೂ ಗಣ್ಯರು ಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net