ಎಫ್‌ಐಆರ್ ಹಿಂದೆ ಕೈವಾಡ

lakshman (2)
Published on

ಮೈಸೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದೂರಿದರು.

ಪಿಎಂ ಕೇರ್ಸ್ ಫಂಡ್‌ನಲ್ಲಿ ಒಂದು ಲಕ್ಷ ಕೋಟಿ ರೂ.ಗಿಂತ ಅಧಿಕ ಹಣ ಸಂಗ್ರಹ ಆಗಿರುವ ಬಗ್ಗೆ ಮಾಹಿತಿ ಇದೆ. ಈ ವಿಷಯವಾಗಿ ಪ್ರಧಾನಿ ಕೇರ್ಸ್‌ ಫಂಡ್ ಹಣವನ್ನು ಇಲ್ಲಿನ ಕಾರ್ಮಿಕರಿಗಾಗಿ ಬಳಸುತ್ತಿದ್ದೀರಾ, ಇಲ್ಲವೇ ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಬಳಸುತ್ತಿದ್ದೀರಾ ಅಥವಾ ರಾಷ್ಟದ ಆರ್ಥಿಕತೆಯನ್ನು ಮೇಲೆತ್ತಲು ಪ್ರಯತ್ನಿಸುತ್ತೀರಾ ಎಂದು ಕಾಂಗ್ರೆಸ್ ಪಕ್ಷದ ಟ್ವೀಟ್‌ನಲ್ಲಿ ಪ್ರಶ್ನಿಸಲಾಗಿದೆ.

ಇಷ್ಟಕ್ಕೆ ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಎಫ್‌ಐಆರ್ ಹಂತಕ್ಕೆ ಹೋಗಿದ್ದು, ಇದರ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ. ಪ್ರಶ್ನಿಸುವುದು ಅಪರಾಧವೇ? ಇದೇನು ಹಿಟ್ಲರ್ ಆಡಳಿತವೇ? ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶವ್ಯಕ್ತಪಡಿಸಿದರು.

ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net