ಫುಟ್ಬಾಲ್ ಅಸೋಸಿಯೇಷನ್ ಮಹಾಸಭೆ ನಾಳೆ

Published on

ಸಿದ್ದಾಪುರ: ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ಜೂ.30ಕ್ಕೆ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಅಮ್ಮತಿ ಪ್ರೌಢಶಾಲೆ ಮೈದಾನದ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಚೇರಿಯಲ್ಲಿ ಆಯೋಜಿಸಲಾಗಿದೆ.


ಮಹಾಸಭೆಗೆ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಅಸ್ಲಮ್ ಖಾನ್ ಹಾಗೂ ಶರವಣ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎ. ನಾಗೇಶ್(ಈಶ್ವರ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲಾ ಫುಟ್ಬಾಲ್ ಸಂಸ್ಥೆಯಲ್ಲಿ ನೋಂದಣಿಯಾದ ಕ್ಲಬ್‌ಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಕಡ್ಡಾಯವಾಗಿ ಮಹಾಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net