ಆನೆಗಳನ್ನು ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಫಲ

ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ಆನೆಗಳನ್ನು ಕಾಡಿಗಟ್ಟುತ್ತಿರುವುದು.
ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ಆನೆಗಳನ್ನು ಕಾಡಿಗಟ್ಟುತ್ತಿರುವುದು.
Published on

ಸಿದ್ದಾಪುರ: ತಿತಿಮತಿ ಅರಣ್ಯ ವಲಯದ ಚೆನ್ನಾಂಗಿ ಶಾಖಾ ವ್ಯಾಪ್ತಿಯ ಬಾಡಗಬಾಣಂಗಾಲ, ಹುಂಡಿ, ಮಠ, ಗ್ರಾಮಗಳಲ್ಲಿ ಬೀಡು ಬಿಟ್ಟಿದ್ದ 28 ಆನೆಗಳನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗಟ್ಟುವಲ್ಲಿ ಸಫಲರಾದರು.

ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 10 ಕ್ಕೂ ಹೆಚ್ಚು ಸಿಬ್ಬಂದಿ ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್‌ನಿಂದ ಮಾರ್ಗೊಳ್ಳಿ ಎಸ್ಟೇಟ್ ಮೂಲಕ ಸುಮಾರು 8 ಕಿ.ಮೀ. ದೂರದಲ್ಲಿರುವ ಕುಶಾಲನಗರ ವಲಯದ ಮಾಲ್ದಾರೆ ಅರಣ್ಯದಲ್ಲಿ ಬೀಡು ಬಿಟ್ಟಿದ್ದ 28 ಆನೆಗಳ ಹಿಂಡನ್ನು ಪಟಾಕಿ ಸಿಡಿಸಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾದರು.

ಈ ಆನೆಗಳು ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿ ಕಾರ್ಮಿಕರು ಹಾಗೂ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದವು. ಆನೆ ಕಾರ್ಯಾಚರಣೆ ಬಗ್ಗೆ ಮೊದಲೇ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲಾಗಿತ್ತು.

ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ ಮತ್ತು ಎಸಿಎಫ್ ಗೋಪಾಲ್ ನಿರ್ದೇಶನದ ಮೇರೆಗೆ ವಲಯ ಅರಣ್ಯಾಧಿಕಾರಿ ಗಂಗಾಧರ ನೇತೃತ್ವದಲ್ಲಿ ಉಪವಲಯ ಅರನ್ಯಾಧಿಕಾರಿ ಶಶಿ, ಗಸ್ತು ಅರಣ್ಯ ಪಾಲಕ ರಾಜೇಶ್, ಆರ್‌ಆರ್‌ಟಿ ಸಿಬ್ಬಂದಿ ಶಂಕರ್, ಮುತ್ತ, ಸುಂದರ, ಭರತ, ಪ್ರದೀಪ್, ರಂಜಿತ್, ದನು, ದಿನು, ರೋಷನ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net