ಇಂಧನ ತುಂಬಿದ್ದ ಲಾರಿ ಪಲ್ಟಿ

h30-petrol
Published on

ಹುಬ್ಬಳ್ಳಿ: ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇಂಧನ ತುಂಬಿದ್ದ ಲಾರಿ ಸೋಮವಾರ ಪಲ್ಟಿಯಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಹುಬ್ಬಳ್ಳಿಯಿಂದ ದಾವಣಗೆರೆಗೆ ಇಂಧನ ತುಂಬಿಕೊಂಡು ಲಾರಿ ಹೊರೆಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಪಲ್ಟಿಯಾದ ಲಾರಿ ಮೇಲ್ಭಾಗದಿಂದ ಇಂಧನ ಸ್ವಲ್ಪ ಪ್ರಮಾಣದಲ್ಲಿ ಸೋರಿಕೆಯಾಗಿತ್ತು. ಯಾವುದೇ ಪ್ರಾಣಹಾನಿ ಸಂಭವಿಸದೇ ಇದ್ದರೂ ಜನರಲ್ಲಿ ಆತಂಕ ಮನೆ ಮಾಡಿತ್ತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಮುಂದಾಗುವ ಅನಾಹುತ ತಪ್ಪಿಸಿದ್ದಾರೆ. ಉತ್ತರ ಸಂಚಾರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ರಮೇಶ ಗೋಕಾಕ್ ಅವರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಚಾಲಕನಿಗೆ ಗಾಯಗಳಾಗಿವೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net