ಶಿಕ್ಷಣದಿಂದ ದೇಶದ ಭವಿಷ್ಯ ಉಜ್ವಲ

CTD 08 MLC
Published on

ಚಿತ್ರದುರ್ಗ: ನಮ್ಮಲ್ಲಿ ಸಂಸ್ಕಾರ ಇದೆ. ಆದರೆ, ಸಾಕ್ಷರತೆ ಕೊರತೆ ಹೆಚ್ಚಿದೆ. ಹೀಗಾಗಿ ಎಲ್ಲರೂ ಶಿಕ್ಷಣ ಪಡೆದಾಗ ಮಾತ್ರ ದೇಶಕ್ಕೆ ಉಜ್ವಲ ಭವಿಷ್ಯವಿದೆ ಎಂದು ಎಂಎಲ್ಸಿ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು.

ತಾಲೂಕಿನ ಜಾನುಕೊಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸಾಕ್ಷರತೆಯ ಕುರಿತು ಹೆಚ್ಚು ಅರಿವು ಮೂಡಿಸಬೇಕು. ಅಕ್ಷರ ಜ್ಞಾನದಿಂದ ಸಶಕ್ತ ಸಮಾಜ ನಿರ್ಮಾಣವಾಗಲಿದೆ ಎಂದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಶಿಕ್ಷಣದಿಂದ ವಂಚಿತರಾದ ಸಮಾಜದ ಎಲ್ಲಾ ಜನರಿಗೂ ಶಿಕ್ಷಣ ನೀಡುವುದು ಇಲಾಖೆಯ ಕರ್ತವ್ಯವಾಗಿದೆ. ಇದರ ಸೌಲಭ್ಯ ಪಡೆದುಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.
ಬಿಇಒ ನಾಗಭೂಷಣ್ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು. ಡಯಟ್ ಉಪನ್ಯಾಸಕರಾದ ವೆಂಕಟೇಶ್, ನಾಗರಾಜ್, ಜ್ಞಾನೇಶ್ವರ್, ಪಿಡಿಒ ಮಂಜುನಾಥ್, ಇಲಾಖೆಯ ಕಾರ್ಯಕ್ರಮ ಸಹಾಯಕ ಮಂಜುನಾಥ್, ಎಸ್‌ಡಿಎಂಸಿ ಅಧ್ಯಕ್ಷೆ ತ್ರೀವೇಣಿ, ಗ್ರಾಪಂ ಸದಸ್ಯ ರಾಮಲಿಂಗಪ್ಪ, ಶಿಕ್ಷಕರಾದ ದಿನೇಶ್, ಶಿವಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net