ಈ ಬಾರಿ ಸರಳ ದಸರಾ ಆಚರಿಸಲು ಸರ್ಕಾರ ನಿರ್ಧಾರ

mysuru dasara
Published on

ಮೈಸೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸರಳ ದಸರಾ ಆಚರಿಸುವ ನಿರ್ಧಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಗುರುವಾರ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗದವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಮಹದೇವಪ್ಪ ಪೋಸ್ಟ್ ಮಾಡಿದ್ದಾರೆ.

ಸರಳ ದಸರಾಗೆ ಒತ್ತಾಯಿಸಿದ್ದ ರೈತರು

ಕೋವಿಡ್ ಹಿನ್ನೆಲೆಯಲ್ಲಿ 2020, 2021ನೇ ದಸರಾ ಅರಮನೆ ಆವರಣಕ್ಕೆ ಸೀಮಿತವಾಗಿತ್ತು. ಕಳೆದ ವರ್ಷ ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗಿತ್ತು. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇರುವ ಸಂದರ್ಭದಲ್ಲಿ ಅದ್ದೂರಿಯಾಗಿ ದಸರಾ ಆಚರಿಸುವುದು ಸರಿಯಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಮೈಸೂರು, ಮಂಡ್ಯದಲ್ಲಿ ಕಾವೇರಿ ಚಳವಳಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಸರಳ ದಸರಾ ಆಚರಿಸುವ ನಿರ್ಧಾರಕ್ಕೆ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net