ರೈತರ ಕಷ್ಟ-ಸುಖಗಳಿಗೆ ಸ್ಪಂದಿಸದ ಸರ್ಕಾರ

IMG-20241112-WA0010
ಹಂಪಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕುರುಬೂರು ಶಾಂತಕುಮಾರ್ ಮಾತನಾಡಿದರು.
Published on

ಹಂಪಾಪುರ: ಸರ್ಕಾರಗಳು ಜಾತಿಯ ಓಲೈಕೆಗೆ ಒತ್ತು ಕೊಡುವಷ್ಟು ರೈತರ ಕಷ್ಟ-ಸುಖಗಳಿಗೆ ಸ್ಪಂದಿಸುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.

ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಗ್ರಾಮದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮತ ಬ್ಯಾಂಕ್ ಗಟಿ ಮಾಡಿಕೊಳ್ಳುವ ಸಲುವಾಗಿ ಜಾತಿ ಓಲೈಕೆ ದಿನಾಚರಣೆಗೆ ಒತ್ತು ನೀಡಲಾಗುತ್ತಿದ್ದು, ರೈತ ದಿನ ಆಚರಣೆಗೆ ಆಸಕ್ತಿ ತೋರುತ್ತಿಲ್ಲ ಎಂದು ವಿಷಾದಿಸಿದರು.

ರೈತ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ರೈತರೇ ಆಚರಿಸುವಂತಾಗಬೇಕು. ಕೃಷಿ ಕ್ಷೇತ್ರಕ್ಕೆ ಮಾರಕವಾಗುವ ನೀತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಾರಿಯಾಗುತ್ತಿರುವುದು ರೈತರನ್ನು ಕೃಷಿಯಿಂದ ಒಕ್ಕಲೆಬಿಸುವ ಹುನ್ನಾರವಾಗಿದೆ. ರೈತರು ಜಾಗೃತರಾಗಿ ಪ್ರತಿ ಹಳ್ಳಿಯಲ್ಲಿ ರೈತ ಸಂಘಟನೆಯನ್ನು ಕಟ್ಟುವ ರೈತಶಕ್ತಿಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಸಭೆ ಆರಂಭದಲ್ಲಿ ರೈತರು ನೂರಾರು ಸಮಸ್ಯೆಗಳನ್ನು ತೆರೆದಿಟ್ಟಾಗ, ರೈತ ಜಾಗೃತಿಯೇ ಸಮಸ್ಯೆಗೆ ಪರಿಹಾರ ಎಂದು ತೀರ್ಮಾನಿಸಲಾಯಿತು. ಸಂಘದ ತಾಲೂಕು ಅಧ್ಯಕ್ಷರಾಗಿ ರಾಜೇಶ್, ಸಂಘಟನಾ ಕಾರ್ಯದರ್ಶಿಯಾಗಿ ಹೇಮಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ರೈತ ಮುಖಂಡರಾದ ಹತ್ತಳ್ಳಿ ದೇವರಾಜ್, ಪ್ರಧಾನ ಕಾರ್ಯದಶಿ ಸುರೇಶ್ ಶೆಟ್ಟಿ, ಸುನಿಲ್ ಕುಮಾರ್, ಬರಡನಪುರ ನಾಗರಾಜ್, ನೀಲಕಂಠಪ್ಪ, ರಮೇಶ್, ಗಂಗಾಧರ್, ಹರೀಶ್, ವೃಷಭೇಂದ್ರ, ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net