ಸರ್ಕಾರ ಶಾಲೆಗಳಿಗೆ ಅನುದಾನ ನೀಡಲಿ

14 SIRGUPPA 01
ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಸದಸ್ಯರು ತಹಸೀಲ್ದಾರ್ ಗೌಸೀಯಾ ಬೇಗಂ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಒಕ್ಕೂಟದ ಜಿಲ್ಲಾ ಅಧ್ಯಕ್ಷ ಎಂ.ಪಂಪಾಪತಿ,ಸದಸ್ಯರಾದ ಹನುಮಂತ ರೆಡ್ಡಿ, ಶಬ್ಬಿರ್, ಮಾರುತಿ ಇತರರಿದ್ದರು.
Published on

ಸಿರಗುಪ್ಪ: ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರ ಅನುದಾನಕ್ಕೆ ಒಳಪಡಿಸಬೇಕೆಂದು ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ಸದಸ್ಯರು ತಹಸೀಲ್ದಾರ್ ಗೌಸೀಯಾ ಬೇಗಂ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಕಾರ್ಯದರ್ಶಿ ಎಂ.ಮೌಲಾಲಿ ಮಾತನಾಡಿ, ಅನುದಾನಿತ ಶಾಲೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದು, ಮುಂಬರುವ ದಿನಗಳಲ್ಲಿ ಶಾಲೆ ನಡೆಸುವುದು ಕಷ್ಟವಾಗುತ್ತದೆ. ಕರ್ನಾಟಕದಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ವತಿಯಿಂದ ವೇತಾನನುದಾನವನ್ನು ನೀಡಲಾಗುತ್ತಿತ್ತು. 1986 ಕ್ಕೆ ಸ್ಥಗಿತಗೊಂಡಿತು. 1999ರಲ್ಲಿ ಕಾಂಗ್ರೆಸ್ ಸರ್ಕಾರವು 1987ರಿಂದ 1992 ರವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾಸಂಸ್ಥೆಗಳಿಗೆ ವೇತಾನನುದಾನವನ್ನು ನೀಡಿತ್ತು. 2006ರಲ್ಲಿ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ 1987 ರಿಂದ 1995 ರವರೆಗೆ ಎಲ್ಲ ವರ್ಗದ ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನವನ್ನು ನೀಡಿತು. 1995 ನಂತರ ನಿರಂತರವಾಗಿ ಹೋರಾಟ ಮಾಡಿದರೂ ಅನುದಾನಕ್ಕೆ ಒಳಪಡಿಸುತ್ತಿಲ್ಲ. ಅನುದಾನ ರಹಿತ ಕನ್ನಡ ಶಾಲೆಗಳು ಅವನತಿಯತ್ತ ಸಾಗಿವೆ ಎಂದರು.

ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ 2012ರ ತನಕ ಪ್ರಾರಂಭವಾದ ಶಾಲಾ ಕಾಲೇಜುಗಳನ್ನು ಅನುದಾನಕ್ಕೊಳಪಡಿಸಿ, ರಾಜಾದ್ಯಂತ 29 ವಷಗಳ ಬೇಡಿಕೆಯಾದ 1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ವೇತನಾನುದಾನವನ್ನು ನೀಡಬೇಕು. ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುವ ಸಾವಿರಾರು ಶಿಕ್ಷಕರ ಬದುಕಿಗೆ ಹಾಗೂ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ಬಡ ಮಕ್ಕಳಿಗೆ ಆಸರೆಯಾಗಬೇಕೆಂದು ತಿಳಿಸಿದರು.

1995ರ ನಂತರ ಪ್ರಾರಂಭವಾದ ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನಕ್ಕೊಳಪಡಿಸಬೇಕು, ಬಡ ಮಕ್ಕಳಿಗೆ ದಾರಿದೀಪವಾದ ಖಾಸಗಿ ಶಾಲೆಗಳಿಗೆ ಮರು ಜಾರಿ ಮಾಡಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, (71ಜೆ) ಕಾನೂನು ಪ್ರಕಾರ ಎಲ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net