ತಪ್ಪಿತಸ್ಥ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ

28-2
ಸಾಲಿಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
Published on

ಸಾಲಿಗ್ರಾಮ: ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿಶ್ವವೇ ಸ್ಮರಿಸಿ ಜಯಂತಿ ಆಚರಣೆ ಮಾಡುತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ವಾಜಮಂಗಲದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ಸರಿಯಲ್ಲ. ಕೂಡಲೇ ತಪ್ಪಿತಸ್ಥ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರಾಂಪುರ ಲೋಕೇಶ್ ಒತ್ತಾಯಿಸಿದರು.

ಸಾಲಿಗ್ರಾಮ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಆಯೋಜಿಸಿದ್ದ ಬಾಬು ಜಗಜೀವನರಾಮ್ ಮತ್ತು ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿನಿತ್ಯ ನಾವು ಅಂಬೇಡ್ಕರ್ ಜಯಂತಿ ಆಚರಣೆ ಮಾಡುವುದು ಎಷ್ಟು ಮುಖ್ಯವೋ ಅಂಬೇಡ್ಕರ್ ಅವರ ಗೌರವವನ್ನು ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯ. ಹಾಗಾಗಿ ಅವರ ಹೆಸರಿಗಾಗಲಿ, ಭಾವಚಿತ್ರಕ್ಕಾಗಲಿ ಆಗೌರವ ತರುವವರ ವಿರುದ್ಧ ಧ್ವನಿ ಎತ್ತಲೇಬೇಕು ಎಂದರು.

ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಗಂಭೀರವಾಗಿ ಪರಿಗಣಿಸಿ ವಿಶ್ವನಾಯಕರ ಗೌರವ ಉಳಿಸಿ. ಅಲ್ಲದೆ ನಿರ್ಲಕ್ಷೃ ಮಾಡಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಮಾಜದ ಮುಖಂಡರು ಇಂತಹ ಘಟನೆಗಳು ಸಂಬವಿಸಿದ್ದಾಗ ಪಕ್ಷಾತೀತವಾಗಿ ಖಂಡಿಸುವ ಕೆಲಸ ಮಾಡಿ ಎಂದು ಮನವಿ ಮಾಡಿದರು.

ಪದಾಧಿಕಾರಿಗಳಾದ ಡಿ.ದೇವರಾಜು, ಹರದನಹಳ್ಳಿ ಮಂಜು, ಗಂಗಾಧರ್, ಶಿವು, ಬಸವರಾಜು, ಜಗದೀಶ್, ರಾಮಕೃಷ್ಣ, ಸೋಮಶೇಖರ್, ಶ್ರೀನಿವಾಸ್, ಶಕೀಲ್ ಅಹಮ್ಮದ್, ಮನೋಜ್, ಶೆಟ್ಟಿಸೋಮಶೇಖರ್, ಲೋಕೇಶ್ ಇತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net