

ರಾಯಚೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸೇರಿದಂತೆ ಅನೇಕರು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಲು ಶ್ರಮಿಸಿದ್ದಾರೆ. ಆದರೆ ದೇವರಾಜ ಅರಸು ಕೈಗೊಂಡ ಕಾರ್ಯಗಳಿಂದ ಅವರು ಇಂದಿಗೂ ಜೀವಂತವಾಗಿದ್ದು, ಅವರ ಆಶಯಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಬೇಕಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ ಹೇಳಿದರು.
ಸ್ಥಳೀಯ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಸಂಘದಿಂದ ಶನಿವಾರ ಏರ್ಪಡಿಸಿದ್ದ ಡಿ.ದೇವರಾಜ ಅರಸು ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅರಸು ಕೈಗೊಂಡ ಕಾರ್ಯಗಳನ್ನು ಎಂದಿಗೂ ಮರೆಯುವಂತಿಲ್ಲ ಎಂದರು.
ಹಿಂದುಗಳ ವರ್ಗಗಳ ಅಭಿವೃದ್ಧಿ ಬಗ್ಗೆ ಎಲ್ಲ ಪಕ್ಷಗಳ ನಾಯಕರು ಮಾತನಾಡುತ್ತಾರೆ. ಆದರೆ ಜನರು ಅಕಾರ ನೀಡಿದಾಗ ಮಾತ್ರ ನೀಡಿದ ಭರವಸೆಗಳನ್ನು ಮರೆಯುತ್ತಾರೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಏನಾದರೂ ಮಾಡಬೇಕೆಂಬ ಮನಸ್ಸು ಜನಪ್ರತಿನಿಗಳಲ್ಲಿ ಬರಬೇಕಾಗಿದೆ ಎಂದು ಹೇಳಿದರು.
ಕೂಡ್ಲಿಗಿಯ ಮಾಜಿ ಶಾಸಕ ರವೀಂದ್ರನಾಥ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರತಿ ವಿಧಾನಸಭೆ ಕ್ಷೇತ್ರದಿಂದ ತಲಾ ಒಬ್ಬರಂತೆ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿದವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ, ಯಾದಗಿರಿ ಜಿಲ್ಲಾಧ್ಯಕ್ಷ ಅಪ್ಪಣ್ಣ ಚಿನ್ನಕಾರ್, ಕಲಬುರಗಿ ಜಿಲ್ಲಾಧ್ಯಕ್ಷ ಮಹಾಂತೇಶ, ಖಾಸಗಿ ಶಿಕ್ಷಕರ ಉಪನ್ಯಾಸಕರ ಸಂಘದ ಅಧ್ಯಕ್ಷ ಭೀರಲಿಂಗೇಶ್ವರ ಪೂಜಾರ, ಪದಾಕಾರಿಗಳಆದ ವಿಜಯಭಾಸ್ಕರ ಇಟಗಿ, ಸುಮಾ ಗಸ್ತಿ, ನರಸಪ್ಪ ಉಪಸ್ಥಿತರಿದ್ದರು.