ರಾಜ್ಯದಲ್ಲಿ ಲೂಟಿ ಮಾಡುತ್ತಿರುವ ಸರ್ಕಾರ

20blh4 bjp press meet
Published on

ಬೈಲಹೊಂಗಲ: ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಆಡಳಿತ ಜನರ ಬದುಕಿಗೆ ಶಾಪವಾಗಿದೆ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನನ ಪ್ರಮಾಣ ಪತ್ರದಿಂದ ಹಿಡಿದು ಎಲ್ಲೆಡೆ ರಾಜ್ಯ ಕಾಂಗ್ರೆಸ್ ಸರ್ಕಾರ ವಸೂಲಿ ದಂಧೆಗೆ ಇಳಿದಿದೆ. ಹೈಕ್‌ಮಾಂಡ್ ಪಾಲಿಗೆ ಕರ್ನಾಟಕ ಎಟಿಎಂ ಆಗಿದೆ ಎಂದು ತಿಳಿಸಿದರು.

ಮುಡಾ, ವಾಲ್ಮೀಕಿ ನಿಗಮದ 187 ಕೋಟಿ ರೂ. ಲೂಟಿ, ಸ್ಮಾರ್ಟ್ ಮೀಟರ್ ಹಗರಣದಲ್ಲೂ ಕಾಂಗ್ರೆಸ್ಸಿಗರೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕಾರ್ಮಿಕ ಸಚಿವ ಸಂತೋಷ ಲಾಡ್ ಕಾರ್ಮಿಕ ಮಕ್ಕಳ ಪೌಷ್ಟಿಕಾಂಶ ಕಿಟ್ ಖರೀದಿಯಲ್ಲಿ 75 ಕೋಟಿ ರೂ. ಹಗರಣ ಮಾಡಿದ್ದಾರೆ.

ಗುತ್ತಿಗೆದಾರರಿಂದ ಶೇ.60 ರಷ್ಟು ಕಮಿಷನ್ ಪಡೆಯುತ್ತಿದ್ದರಿಂದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಇವೆಲ್ಲ ಕಾಂಗ್ರೆಸ್ ಸರ್ಕಾರದ ವ್ಯವಸ್ಥಿತ ಲೂಟಿಯಾಗಿದೆ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರೋಧಿ ನೀತಿ, ಮುಸ್ಲಿಮರ ತುಷ್ಟೀಕರಣದಿಂದ ಸರ್ಕಾರಿ ಕಾಮಗಾರಿಗಳಲ್ಲೂ ಹಿಂದುಗಳಿಗೆ ಅನ್ಯಾಯ ಮಾಡಿದ್ದಾರೆ. ವಕ್ಫ್ ಮೂಲಕ ಹಿಂದು ಮಠ-ಮಾನ್ಯಗಳು ಹಾಗೂ ರೈತರ ಆಸ್ತಿಗಳ ಕಬಳಿಸಲು ಯತ್ನ, ಗೋಹತ್ಯೆ ಸೇರಿ ಹಿಂದು ವಿರೋಧಿ ನೀತಿ ಪ್ರದರ್ಶಿಸಿದೆ ಎಂದರು.

ಬಿಜೆಪಿ ಮುಖಂಡ ವಿಜಯ ಮೆಟಗುಡ್ಡ, ಶಂಕರ ಮಾಡಲಗಿ, ಸುಭಾಸ ತುರಮರಿ, ಶ್ರೀಶೈಲ ಯಡಳ್ಳಿ, ದುಂಡೇಶ ಗರಗದ, ಸಂತೋಷ ಹಡಪದ, ಸಚಿನ್ ಕಡಿ, ಲಕ್ಕಪ್ಪ ಕಾರಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net