ಸರ್ಕಾರದ ‘ಶಕ್ತಿ ಯೋಜನೆ’ ಸಾರ್ಥಕ

ylp bus
Published on

ಯಲ್ಲಾಪುರ: ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಅನುಷ್ಠಾನವಾಗುತ್ತಿದೆ. ಉಪಕಾರದ ಬಗ್ಗೆ ಜನರು ಕೃತಜ್ಞತೆ ಹೊಂದಿದರೆ ಸರ್ಕಾರದ ಶ್ರಮ ಸಾರ್ಥಕ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಯಲ್ಲಾಪುರ ಘಟಕವೊಂದರಲ್ಲೇ ಕಳೆದ ಎರಡು ವರ್ಷಗಳಲ್ಲಿ 43 ಕೋಟಿ ರೂ. ವೆಚ್ಚದ ಪ್ರಯಾಣವನ್ನು ಮಹಿಳೆಯರು ಉಚಿತವಾಗಿ ಮಾಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಉಲ್ಲಾಸ ಶಾನಭಾಗ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ತಾಲೂಕಿನಲ್ಲಿ ಶೇ 98ರಷ್ಟು ಜನರಿಗೆ ತಲುಪಿಸಲಾಗಿದೆ ಎಂದರು.

ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಗಾಂವ್ಕಾರ, ಘಟಕ ವ್ಯವಸ್ಥಾಪಕ ಸಂತೋಷ ವೆರ್ಣೆಕರ, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಜಿಪಂ ಮಾಜಿ ಸದಸ್ಯವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್ಟ ಉಪಳೇಶ್ವರ, ತಾಪಂ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಮಹಿಳಾ ಕಾಂಗ್ರೆಸ್ ತಾಲೂಕಾಧ್ಯಕ್ಷೆ ಪೂಜಾ ನೇತ್ರೇಕರ, ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಎನ್.ಕೆ. ಭಟ್ಟ, ಗ್ಯಾರಂಟಿ ಸಮಿತಿಯ ಸದಸ್ಯರಾದ ಟಿ.ಸಿ. ಗಾಂವ್ಕಾರ, ಶಿವಾನಂದ ನಾಯ್ಕ, ಅನಿಲ ಮರಾಠೆ, ಮುಶರತ್ ಶೇಖ್ ಇತರರು ಭಾಗವಹಿಸಿದ್ದರು.

ಇದೇ ವೇಳೆ ಚಾಲಕ ನಿರ್ವಾಹಕರನ್ನು ಗೌರವಿಸಲಾಯಿತು. ಗ್ಯಾರಂಟಿ ಸದಸ್ಯರಾದ ಮಹೇಶ ನಾಯ್ಕ, ಎಂ.ಕೆ. ಭಟ್ಟ ಯಡಳ್ಳಿ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net