ವಿಜೃಂಭಣೆಯ ಕಟ್ಟೆ ಮಾರಮ್ಮ ಜಾತ್ರೆ

ಸರಗೂರು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ಕಟ್ಟೆ ಮಾರಮ್ಮ ಜಾತ್ರೆ ವಿಜೃಂಭಣೆಯಿಂದ ನಡೆಯಿತು.
ಸರಗೂರು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ಕಟ್ಟೆ ಮಾರಮ್ಮ ಜಾತ್ರೆ ವಿಜೃಂಭಣೆಯಿಂದ ನಡೆಯಿತು.
Published on

ಸರಗೂರು: ತಾಲೂಕಿನ ಹಂಚೀಪುರ ಗ್ರಾಮದಲ್ಲಿ  ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವ, ಅಮ್ಮನವರ ಪಲ್ಲಕ್ಕಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಅಮ್ಮನವರಿಗೆ ಗುಡಿ ಚಪ್ಪರ ಕಟ್ಟಿ, ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ದೇವರ ಗುಡಿಯನ್ನು ಮದುವಣಗಿತ್ತಿಯಂತೆ ಸಿಂಗಾರಿಸಲಾಗಿತ್ತು. ದೇವಿಯ ಉತ್ಸವಮೂರ್ತಿಯನ್ನು ಗುಡಿಯಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಭಕ್ತರು ಈರುಳ್ಳಿ ಸರವನ್ನು ಹೊತ್ತು ತಂದು ಹರಕೆ ತೀರಿಸಿದರು. ನಂತರ ಮಹಾಮಂಗಳಾರತಿ ಮಾಡಲಾಯಿತು.

ಗ್ರಾಮದ ಶ್ರೀ ಸಿದ್ದಮಲ್ಲೇಶ್ವರ ಪಟ್ಟದ ಮಠದಿಂದ ಅಮ್ಮನವರ ಪಲ್ಲಕ್ಕಿ ಉತ್ಸವವನ್ನು ಬಸವದೊಂದಿಗೆ ಮೆರವಣಿಗೆ ಮಾಡಲಾಯಿತು. ನಂದಿಧ್ವಜ, ವೀರಗಾಸೆ ನೃತ್ಯ, ಸತ್ತಿಗೆ, ಮಂಗಳವಾದ್ಯ, ನಗಾರಿ, ಬಾಣ ಬಿರುಸು ಇತರ ಜಾನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರುಗು ನೀಡಿದವು. ಮಠದ ಚನ್ನಬಸವ ಸ್ವಾಮೀಜಿ, ಕಿರಿಯ ತೋಂಟದಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net