ಮಹಾನ್ ಕಾಯಕ ಯೋಗಿ ಮಡಿವಾಳ ಮಾಚಿದೇವ

01-02-Shiva-1
ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಉದ್ಘಾಟಿಸಿದರು. ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಮಡಿವಾಳ ಸಮಾಜದ ಮುಖಂಡರಾದ ಜಿ.ಶಿವಮೂರ್ತಿ, ಹುಸೇನಪ್ಪ, ಜಂಬಣ್ಣ ಯಕ್ಲಾಸಪುರ, ಶಾಂತಕುಮರ, ಮಲ್ಲೇಶ, ನರಸಪ್ಪ, ವೀರೇಶ, ವೆಂಕಟೇಶ, ಮುನಿಸ್ವಾಮಿ, ಜಿ.ಸುರೇಶ ಇದ್ದರು.
Published on

ರಾಯಚೂರು: ತಮ್ಮ ಕಾಯಕದ ಮೂಲಕ ಸಮಾಜದಲ್ಲಿನ ಅಧರ್ಮ, ಅಸಂಸ್ಕೃತಿಯ ಕೊಳಕನ್ನು ಹೋಗಲಾಡಿಸಿದ ಮಹಾನ್ ಕಾಯಕ ಯೋಗಿ ಮಡಿವಾಳ ಮಾಚಿದೇವರಾಗಿದ್ದಾರೆ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.
ಸ್ಥಳೀಯ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದರು.
ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ ಅತ್ಯಂತ ಪ್ರಮುಖವಾಗಿದ್ದು, ಮಕ್ಕಳು ಶೈಕ್ಷಣಿಕವಾಗಿ ಮುಂದುವರಿದಾಗ ಮಾತ್ರ ಆ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ. ಕಾರಣ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಮಾತನಾಡಿ, ಇಂದು ಜಗತ್ತು ತಂತ್ರಜ್ಞಾನದಿಂದಾಗಿ ವೇಗವಾಗಿ ಓಡುತ್ತಿದ್ದು, ಇದರಿಂದಾಗಿ ಮಕ್ಕಳಲ್ಲಿ ಮಾನವೀಯ ವೌಲ್ಯಗಳು ಕಡಿಮೆಯಾಗುತ್ತಿವೆ. ಮಕ್ಕಳಲ್ಲಿ ಮಾನವೀಯ ವೌಲ್ಯಗಳನ್ನು ಬೆಳೆಸುವ ಮೂಲಕ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡಬೇಕು ಎಂದರು.
ಬೆಳಗಾವಿಯ ಮಾಚಿದೇವ ಯೋಗ ಮಂದಿರದ ಬಸವರಾಜೇಂದ್ರ ಶರಣರು ಉಪನ್ಯಾಸ ನೀಡಿ, ತಮ್ಮ ವಚನಗಳ ಮೂಲಕ ಸಮಾಜದ ಕತ್ತಲೆಯನ್ನು ಕಳೆದು ಅಮೃತವನ್ನು ಉಣಬಡಿಸಿದ ೀಮಂತ ಶರಣ ಮಡಿವಾಳ ಮಾಚಿದೇವ. ಮಾಚಿದೇವರು ಲಕ್ಷಾಂತರ ವಚನಗಳನ್ನು ಬರೆದಿದ್ದು, ಅದರಲ್ಲಿ ಕೇವಲ 400 ವಚನಗಳು ಮಾತ್ರ ನಮಗೆ ಕಾಣಸಿಗುತ್ತವೆ ಎಂದು ಹೇಳಿದರು.
ಇದಕ್ಕೂ ಮುಂಚೆ ಮಡಿವಾಳ ಮಾಚಿದೇವ ವೃತ್ತದಿಂದ ರಂಗಮಂದಿರದವರೆಗೆ ಮಡಿವಾಳ ಮಾಚಿದೇವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ ಮುಖಂಡರಾದ ರವಿ ಬೋಸರಾಜು, ಕೆ.ಶಾಂತಪ್ಪ, ರವೀಂದ್ರ ಜಲ್ದಾರ್ ಇದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಮಡಿವಾಳ ಸಮಾಜದ ಮುಖಂಡರಾದ ಜಿ.ಶಿವಮೂರ್ತಿ, ಹುಸೇನಪ್ಪ, ಜಂಬಣ್ಣ ಯಕ್ಲಾಸಪುರ, ಶಾಂತಕುಮರ, ಮಲ್ಲೇಶ, ನರಸಪ್ಪ, ವೀರೇಶ, ವೆಂಕಟೇಶ, ಮುನಿಸ್ವಾಮಿ, ಜಿ.ಸುರೇಶ, ಆಂಜಿನಯ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net