

ಕೋಟ: ಒಂದು ಸರ್ಕಾರಿ ಅಥವಾ ಅನುದಾನಿತ ಶಾಲೆ ಶತಮಾನ ಕಾಣುವುದು ಸುಲಭದ ಮಾತಲ್ಲ ಅದನ್ನು ಮುನ್ನಡೆಸುವ ಮಹತ್ಕಾರ್ಯ ನಿಜಕ್ಕೂ ಅಭಿನಂದನಾರ್ಹ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.
ಸಾಸ್ತಾನದ ಪಾಂಡೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭಮ ಅಂಗವಾಗಿ ಶತಾವರ್ತ ಸಂಭ್ರಮ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತಮಾಡಿದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಶಾಲೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಹಾಗೂ ಪ್ರಸ್ತುತ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಲಾಯಿತು. ಶಾಲಾ ವಾಹನ ಚಾಲಕರಿಗೆ ‘ಸೇವಾ ಸಾರಥಿ’ ಗೌರವಾರ್ಪಣೆ ನೀಡಲಾಯಿತು.
ಯೋಗಗುರುಕುಲ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಸ್ವಸ್ತಿವಾಚನ ನೀಡಿದರು.
ಪಾಂಡೇಶ್ವರ ರಕ್ತೇಶ್ವರಿ ದೇಗುಲ ಧರ್ಮದರ್ಶಿ ಕೆ.ವಿ.ರಮೇಶ್ ರಾವ್, ಶಾಲಾ ಸಂಚಾಲಕ ಫಾದರ್ ಸುನಿಲ್ ಡಿಸಿಲ್ವಾ, ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್, ಶಿಕ್ಷಣ ಇಲಾಖೆ ಸಂಯೋಜಕ ಪ್ರಕಾಶ್ ಬಿ.ಬಿ., ಪಾಂಡೇಶ್ವರ ಭಾರ್ಗವಿ ಟ್ರಸ್ಟ್ ಮುಖ್ಯಸ್ಥೆ ನಂದಿನಿ ರಾಜೇಶ್ ಆರ್ಯ, ಕ್ಯಾಥೋಲಿಕ್ ಸಭಾ ಸಂತ ಅಂತೋನಿ ಇಗರ್ಜಿ ಅಧ್ಯಕ್ಷೆ ಸರಿತಾ ಗೊನ್ಸಾಲ್ವಿಸ್, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಂ.ಸಿ.ಚಂದ್ರಶೇಖರ್ ಪೂಜಾರಿ, ಸುರಕ್ಷಾ ಸಮಿತಿ ಅಧ್ಯಕ್ಷ ರವೀಶ್ ಶ್ರೀಯಾನ್, ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷ ರವಿ ಪೂಜಾರಿ, ಶಾಲಾ ಹಿಂದಿನ ವಿದ್ಯಾರ್ಥಿ ಸಂಘ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಎಸ್‌ಡಿಎಂಸಿ ಅಧ್ಯಕ್ಷೆ ಸುಜಾತಾ ವೆಂಕಟೇಶ ಪೂಜಾರಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಕೃಷ್ಣ ಪೂಜಾರಿ ವರದಿ ವಾಚಿಸಿದರು. ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಸುರೇಶ್ ಪೂಜಾರಿ ಸ್ವಾಗತಿಸಿದರು. ಶಾಲಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅಲ್ವಿನ್ ಆಂದ್ರಾದೆ, ಹಳೇ ವಿದ್ಯಾರ್ಥಿ ಅಭಿಜಿತ್ ಪಾಂಡೇಶ್ವರ ನಿರೂಪಿಸಿದರು.