

ಕುಂದಾಪುರ: ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿ ಅಧಿಕಾರಕ್ಕೆ ಬಂದ ಮೇಲೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಜನರಿಗೆ ಬಹಳಷ್ಟು ಪ್ರಯೋಜವಾಗಿದೆ. ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೆ ಸರ್ಕಾರದ ಐದೂ ಗ್ಯಾರಂಟಿಗಳು ನಿರಂತರವಾಗಿ ನಡೆಯುತ್ತದೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿನೇಶ ಹೆಗ್ಡೆ ಮೊಳಹಳ್ಳಿ ಹೇಳಿದರು.
ಕುಂದಾಪುರ ತಾಪಂ ಕಚೇರಿಯಲ್ಲಿ ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೇರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿನೋದ ಕ್ರಾಸ್ಟೋ, ಕುಂದಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಸದಾನಂದ ಶೆಟ್ಟಿ ಕೆದೂರು, ಶಂಕರ ಕುಂದರ್, ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಸಂತೋಷ ಕುಮಾರ್ ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.