ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳು ಕ್ಷಣಿಕ

20NGD1
ನಂಜನಗೂಡು ತಾಲೂಕಿನ ದೇಬೂರು ಗ್ರಾಮದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಭಾರತಿಶೆಟ್ಟಿ ಮಾತನಾಡಿದರು. ನಳಿನಗೌಡ, ನಂದಿನಿ ಮಹೇಶ್, ರಾಧಿಕಾ ಶ್ರೀನಾಥ್ ಇದ್ದರು.
Published on

ನಂಜನಗೂಡು: ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಸಬಲೀಕರಣಕ್ಕಾಗಿ ನೀಡಿರುವ ಯೋಜನೆಗಳು ದೂರದೃಷ್ಟಿಯಿಂದ ಕೂಡಿದ್ದು, ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳು ಕ್ಷಣಿಕವಾದದ್ದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದರು.


ತಾಲೂಕಿನ ದೇಬೂರು ಗ್ರಾಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ನೀಡಿ ಮಹಿಳೆಯರನ್ನು ಸೆಳೆಯುವ ಹುನ್ನಾರ ನಡೆಸಿದೆ. ಇವರು ಜಾರಿ ಮಾಡಿರುವ ಯೋಜನೆಗಳು ತಾತ್ಕಾಲಿಕವಾದದ್ದು. ಆದರೆ ನರೇಂದ್ರ ಮೋದಿ ಅವರು ದೂರದೃಷ್ಟಿಯಿಂದ ಜಾರಿಗೊಳಿಸಿರುವ ಸುಕನ್ಯಾ ಸಮೃದ್ಧಿ ಯೋಜನೆ, ಉಜ್ವಲ್ ಯೋಜನೆ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಮುದ್ರಾ ಯೋಜನೆ ಸೇರಿದಂತೆ ನಾನಾ ಯೋಜನೆಗಳು ದೇಶದ ಪ್ರಗತಿಯ ಹಿತದೃಷ್ಟಿಯಿಂದ ಕೂಡಿವೆ. ಆದರೆ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಜನರನ್ನು ಓಲೈಸುವ ಉದ್ದೇಶದಿಂದ ಕೂಡಿವೆಯೇ ಹೊರತು ರಾಜ್ಯದ ಅಭಿವೃದ್ಧಿಯ ದೃಷ್ಟಿಕೋನ ಹೊಂದಿಲ್ಲ ಎಂದು ಜರಿದರು.


ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂದಿನಿ ಮಹೇಶ್ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿ ಹಾಗೂ ಸುರಕ್ಷತೆಯ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಕೂಗು ರಾಷ್ಟ್ರದೆಲ್ಲೆಡೆ ಕೇಳಿ ಬರುತ್ತಿದೆ. ನಮ್ಮ ಸಂಸ್ಕೃತಿ, ಪರಂಪರೆ ರಕ್ಷಣೆಯಾಗಬೇಕಾದರೆ, ದೇಶದ ಅಖಂಡತೆ ಉಳಿಯಬೇಕಾದರೆ ನರೇಂದ್ರ ಮೋದಿ ಅವರಂತಹ ನಾಯಕತ್ವ ದೇಶಕ್ಕೆ ಜರೂರಿದೆ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದು ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಳಿನಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂದಿನಿ ಮಹೇಶ್, ರಾಧಿಕಾ ಶ್ರೀನಾಥ್, ರಾಜ್ಯ ಮಹಿಳಾ ಮೋರ್ಚಾ ಸದಸ್ಯೆ ಸುನಂದರಾಜ್, ಜಯಲಕ್ಷ್ಮೀ, ಗಾಯತ್ರಿ, ಜ್ಯೋತಿ ನಾಗೇಶ್, ಸರಸ್ವತಿ, ಮಹದೇವಮ್ಮ, ಭಾಗ್ಯಮ್ಮ, ಪ್ರೇಮ ಶಂಭಯ್ಯ, ನಾಗಮ್ಮ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net