ಅಂಜಲಿ ಕೊಲೆ ಪ್ರಕರಣದಲ್ಲಿ ಕಾಣದ ಕೈಗಳ ಕೈವಾಡ

New CID 789
Published on

ಹುಬ್ಬಳ್ಳಿ : ಅಂಜಲಿ ಅಂಬಿಗೇರ ಹತ್ಯೆಯಲ್ಲಿ ಕಾಣದ ಕೈಗಳ ಕೈವಾಡವಿದ್ದು, ಈ ಬಗ್ಗೆ ಸಿಐಡಿ ತನಿಖಾಧಿಕಾರಿಗಳು ಪಾರದರ್ಶಕವಾಗಿ ತನಿಖೆ ನಡೆಸಿ ಅವಳ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಸಮತಾ ಸೇನಾ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಆಗ್ರಹಿಸಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಿವಿಧ ದಲಿತ ಸಂಘಸಂಸ್ಥೆಗಳ ಮಹಾಮಂಡಳದಿಂದ ಸಿಐಡಿ ಡಿಜಿಪಿ ಎಂ.ಎ. ಸಲೀಂ ಅವರಿಗೆ ಮಂಗಳವಾರದಂದು ಮನವಿ ಸಲ್ಲಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಅಂಜಲಿ ಕೊಲೆ ಖಂಡನೀಯ, ಅವಮಾನೀಯ. ಹಂತಕನಿಗೆ ಕಠಿಣ ಶಿಕ್ಷೆ ಆಗಬೇಕು. ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ನಮ್ಮದಾಗಿದೆ. ಆದರೆ, ಕೆಲವು ಹಿತಾಸ್ತಕಿಗಳು ತನಿಖೆಯ ದಾರಿ ತಪ್ಪಿಸುತ್ತಿವೆ. ಅಂಜಲಿ ಹತ್ಯೆ ಪ್ರಕರಣದ ಆರೋಪಿ ಗಿರೀಶ ಸಾವಂತನನ್ನು ಕಾಣದ ಕೈಗಳು ಬಳಕೆ ಮಾಡಿರುವುದು ಮೇಲೊ್ನೕಟಕ್ಕೆ ಕಂಡುಬರುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಪೂರಕ ಎನ್ನುವಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ಅಂಜಲಿ ಅಜ್ಜಿಯು ಒಬ್ಬನ ವಿರುದ್ಧ ಫೋಕ್ಸೊ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಈರಣ್ಣ ಎಂಬಾತನ ಮೇಲೆ ಫೋಕೊ್ಸೕ ಕೇಸ್ ಇದೆ. ಆತ ಅಂಜಲಿ ಹತ್ಯೆಯಾದ ದಿನದಿಂದ ತಲೆಮರೆಸಿಕೊಂಡಿದ್ದಾನೆ. ಅವನ ರಕ್ಷಣೆ ಮಾಡಿವರು ಯಾರು? ಆಶ್ರಯ ನೀಡಿದವರ್ಯಾರು ? ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net