

ಹುಬ್ಬಳ್ಳಿ: ಬಾಲಕಿಗೆ ಜತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಸಾರ್ವಜನಿಕರೇ ಮುಖ್ಯ ಪೊಲೀಸ್ ಪೇದೆಗೆ ಥಳಿಸಿ, ಇಲ್ಲಿಯ ಕೇಶ್ವಾಪೂರ ಠಾಣೆಗೆ ಒಪ್ಪಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ನಗರದ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಮೆಹಬೂಬ್‌ಸಾಬ್ ಖಾದರಿನವರ ಎಂಬಾತನ ವಿರುದ್ಧ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಮನೆ ಪಕ್ಕದಲ್ಲಿ ವಾಸವಿದ್ದ ಅಪ್ರಾಪ್ತರ ಜತೆ ಅನುಚಿತ ವರ್ತನೆ ತೋರಿದದ ಹಿನ್ನೆಲೆಯಲ್ಲಿ ಸಾರ್ವಜನಿಕರು ನಡು ರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಸುದ್ದಿಗಾರರೊಂದಿಗೆ ಮಾತನಾಡಿ, ಘಟನೆ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೇಶ್ವಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿಸಿದ್ದಾರೆ.