ದೇಶದ ಇತಿಹಾಸವೇ ಕಾಂಗ್ರೆಸ್ ಇತಿಹಾಸ

28-12-Shiva-3
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಎನ್.ಎಸ್.ಬೋಸರಾಜು ಮಾತನಾಡಿದರು. ಶಾಸಕ ಹಂಪಯ್ಯ ನಾಯಕ, ಮುಖಂಡರಾದ ಜಿ.ಬಸವರಾಜ ರೆಡ್ಡಿ, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಜಯಣ್ಣ,, ಜಿ.ಶಿವಮೂರ್ತಿ ಇದ್ದರು.
Published on

ರಾಯಚೂರು: ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ ಕೊಡಿಸುವಲ್ಲಿ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದು, ದೇಶದ ಇತಿಹಾಸವೇ ಕಾಂಗ್ರೆಸ್‌ನ ಇತಿಹಾಸವಾಗಿದೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸ್ಥಳೀಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪಕ್ಷದ ಅನೇಕ ನಾಯಕರು ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ ಎಂದರು.
ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಾಗಿರದೇ ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟ ಸಂಘಟನೆಯಾಗಿದೆ. ಪಕ್ಷದ ತತ್ತ್ವ ಸಿದ್ಧಾಂತ ಹಾಗೂ ಜಾತ್ಯಾತೀತ ನಿಲುವಿನ ಬಗ್ಗೆ ಇಂದಿನ ಯುವಕರಿಗೆ ಮಾಹಿತಿ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಶ್ರಮಿಸಬೇಕು ಎಂದು ಹೇಳಿದರು.
ಪಕ್ಷದ ಹಿರಿಯ ಮುಖಂಡ ಪಾರಸಮಲ್ ಸುಖಾಣಿ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿ ಮಾಡುವಲ್ಲಿ ಪಕ್ಷದ ಪಾತ್ರ ದೊಡ್ಡದಾಗಿದೆ. ಕಾರ್ಯಕರ್ತರು ಪಕ್ಷದ ಸಂಘಟನೆ ಮಾಡುವ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಕಾರಕ್ಕೆ ತರಲು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದ ಹಿರಿಯನ್ನು ಜಿಲ್ಲಾ ಕಾಂಗ್ರೆಸ್‌ನಿಂದ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಹಂಪಯ್ಯ ನಾಯಕ, ಪಕ್ಷದ ಮುಖಂಡರಾದ ಜಿ.ಬಸವರಾಜ ರೆಡ್ಡಿ, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಜಯಣ್ಣ, ಬಸವರಾಜ ಪಾಟೀಲ್ ದರೂರ, ದೇವಣ್ಣ ನಾಯಕ, ಜಿ.ಶಿವಮೂರ್ತಿ, ಶ್ರೀದೇವಿ ನಾಯಕ, ನಾಗವೇಣಿ ಪಾಟೀಲ್, ಶಶಿಕಲಾ ಭೀಮರಾಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net