ಮುಂದಿನ ರಾಜ್ಯೋತ್ಸವಕ್ಕೆ ಕ್ರೀಡಾಂಗಣ ನಿರ್ಮಾಣದ ಆಶಯ

Btw_Rajyotsava
Published on

ಬಂಟ್ವಾಳ: ಬಂಟ್ವಾಳದಲ್ಲಿ ಕ್ರೀಡಾಂಗಣದ ಕೊರತೆಯಿದೆ. ಭವಿಷ್ಯದ ಕ್ರೀಡಾಪಟುಗಳಾಗಿರುವ ಶಾಲಾಮಕ್ಕಳಿಗೆ ಕ್ರೀಡಾಂಗಣದ ಅಗತ್ಯ ಇದ್ದು ರಾಜಕೀಯ ರಹಿತವಾಗಿ ಎಲ್ಲರೂ ಒಗ್ಗಟ್ಟಿನಿಂದ ಕ್ರೀಡಾಂಗಣ ನಿರ್ಮಾಣಕ್ಕೆ ಶ್ರಮಿಸಬೇಕು, ಮುಂದಿನ ರಾಜ್ಯೋತ್ಸವದ ಒಳಗಾಗಿ ಕ್ರೀಡಾಂಗಣ ಒದಗಿಸಲು ಪ್ರಯತ್ನಿಸಬೇಕು ಎಂದು ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ ಆಶಯ ವ್ಯಕ್ತಪಡಿಸಿದರು.

ಬಿ.ಸಿ.ರೋಡನ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಭಾರ ತಹಶೀಲ್ದಾರ್ ಅರವಿಂದ ಎ.ಎಂ. ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಯ್ಕ ಗೌರವ ವಂದನೆ ಸ್ವೀಕರಿಸಿದರು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹಿಂದೆ ಕನ್ನಡದಲ್ಲಿ ವ್ಯವಹರಿಸುವ ಅವಕಾಶವಿತ್ತು. ಆದರೆ ಬ್ಯಾಂಕ್ ವಿಲೀನದಿಂದ ಇಂದು ಬೇರೆ ರಾಜ್ಯ ಭಾಷೆಗಳ ಮೂಲಕ ವ್ಯವಹರಿಸಬೇಕಾದ ಪರಿಸ್ಥಿತಿ ಬಂದಿರುವುದು ಖೇದಕರ ಎಂದರು.

ಪ್ರಭಾರ ತಹಶೀಲ್ದಾರ್ ಅರವಿಂದ ಎ.ಎಂ. ರಾಜ್ಯೋತ್ಸವ ಸಂದೇಶ ನೀಡಿದರು. ವಾಮದಪದವು ಸರ್ಕಾರಿಪ್ರೌಢಶಾಲೆಯ ವಿದ್ಯಾರ್ಥಿನಿ ಅಂಕಿತಾ ದಿಕ್ಸೂಚಿ ಭಾಷಣ ಮಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ 140 ಮಂದಿ ವಿದ್ಯಾರ್ಥಿಗಳಿಗೆ ತಾಲೂಕು ಪಂಚಾಯಿತಿ ವತಿಯಿಂದ ಕ್ರೀಡಾವಸ್ತ್ರ ವಿತರಿಸಲಾಯಿತು.

ತಾ.ಪಂ. ಇಒ ಸಚಿನ್ ಕುಮಾರ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.ವಂದಿಸಿದರು, ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net