ಪ್ರಜಾಪ್ರಭುತ್ವದ ಆಶಯ ಮಣ್ಣುಪಾಲು

1blrp5
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಆಯೋಜಿಸಿದ್ದ ಬೇಲೂರಿನಲ್ಲಿ ಬೈಕ್ ಜಾಥಾ ಜರುಗಿತು.
Published on

ಬೇಲೂರು: ಭ್ರಷ್ಟರು, ಅಪ್ರಮಾಣಿಕರು, ಸ್ವಜನ ಪಕ್ಷಪಾತಿಗಳು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆಸಿಬಿ ಪಕ್ಷಗಳನ್ನು ಕಿತ್ತೊಗೆಯಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.


ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಬೈಕ್ ಜಾಥಾ ಶುಕ್ರವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ಕುಟುಂಬ ರಾಜಕಾರಣವನ್ನು ಒಪ್ಪಿಕೊಳ್ಳದೆ ಜನಪರ ಕಾಳಜಿಯುಳ್ಳ ನಮ್ಮ ಪಕ್ಷವನ್ನು ಜನರು ಬೆಂಬಲಿಸಬೇಕು ಎಂದರು.


ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ಜೀವನ್ ಮಾತನಾಡಿ, ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅನ್ನು ಜನರು ತಿರಸ್ಕರಿಸಬೇಕು. ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣ ಕುರಿತು ಜನ ಜಾಗೃತಿ ಮೂಡಿಸಲು ಬೈಕ್ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್, ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ನರಸಿಂಹಮೂರ್ತಿ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಕೃಷ್ಣ, ಕುಂಬಾರ್, ನಂದರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net