ಪತ್ನಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

allabhakshi
ಜೀವಾವಧಿ ಶಿಕ್ಷೆಗೆ ಒಳಗಾದ ಅಲ್ಲಾಭಕ್ಷಿ.
Published on

ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ಪತ್ನಿಗೆ ಡಿಶ್ ಕೇಬಲ್‌ನಿಂದ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪತಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ ನಾಲ್ಕು ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ.

ಬೊಮ್ಮನಕಟ್ಟೆಯ ಅಲ್ಲಾಭಕ್ಷಿ (38) ಜೀವಾವಧಿ ಶಿಕ್ಷೆಗೆ ಒಳಗಾದವ. ಈತ ಮದುವೆಯಾದಾಗಿನಿಂದಲೂ ಪತ್ನಿಗೆ ಕಿರುಕುಳ ನೀಡುತ್ತಿದ್ದ. 2021ರ ಜ.5ರಂದು ಬೊಮ್ಮನಕಟ್ಟೆಯ ತನ್ನ ಮನೆಯಲ್ಲಿ 27 ವರ್ಷದ ಪತ್ನಿಯನ್ನು ಕೊಲೆ ಮಾಡಿದ್ದ. ಈ ಬಗ್ಗೆ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ತನಿಖಾಧಿಕಾರಿಯಾಗಿದ್ದ ಎನ್.ಎಸ್.ರವಿ ಅವರು ಅಲ್ಲಾಭಕ್ಷಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಕೆ.ಎಸ್.ಮಾನು ಅವರು ಗುರುವಾರ ಆರೋಪ ಸಾಬೀತಾಗಿದ್ದರಿಂದ ಅಲ್ಲಾಭಕ್ಷಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಕೆ.ಎಸ್.ಮಮತಾ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net