

ವಿಜಯಪುರ: ಊಳುವವನೇ ಭೂಮಿಯ ಒಡೆಯ, ಗರೀಬಿ ಹಟಾವೋ, ಬ್ಯಾಂಕುಗಳ ರಾಷ್ಟ್ರೀಕರಣ ಹೀಗೆ ಮುಂತಾದ ಜನಪರ ಕಾರ್ಯಕ್ರಮಗಳ ಮೂಲಕ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರು ಇಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ನಗರದ ಕಾಂಗ್ರೆಸ್ ಜಿಲ್ಲಾ ಕಾರ್ಯಾಲಯದಲ್ಲಿ ಮಂಗಳವಾರ ದಿ. ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಅವರು ಮಾತನಾಡಿದರು.
ಇಂದಿರಾಗಾಂಧಿ ಅವರು ಭಾರತದಲ್ಲಿ ಅಷ್ಟೇ ಅಲ್ಲ ಇಡೀ ವಿಶ್ವಕಂಡ ಧೀಮಂತ ನಾಯಕಿ. ಬಾಲಕಿಯಾಗಿದ್ದಾಗ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಸ್ವಾತಂತ್ರ್ಯ ನಂತರ ಭಾರತದ ಪ್ರಧಾನಮಂತ್ರಿಯಾಗಿ ತಮ್ಮ ಇಡೀ ಜೀವನವನ್ನು ದೀನದಲಿತರು, ಬಡವರಿಗಾಗಿ ಮೀಸಲಿಟ್ಟಿದ್ದರು. ತಮ್ಮ ದಿಟ್ಟ ನಿರ್ಧಾರಗಳ ಮೂಲಕ ಊಳುವವನೆ ಭೂಮಾಲಿಕ, ಗರೀಬಿ ಹಟಾವೊ, ಬ್ಯಾಂಕ್‌ಗಳ ರಾಷ್ಟ್ರೀಕರಣ, 20 ಅಂಶಗಳ ಕಾರ್ಯಕ್ರಮ, ಆರ್ಥಿಕ ಸುಧಾರಣೆ ಹೀಗೆ ಅನೇಕ ನಿರ್ಣಯಗಳನ್ನು ಜಾರಿಗೊಳಿಸಿ ಭಾರತೀಯರ ಜೀವನ ಮಟ್ಟವನ್ನು ಸುಧಾರಿಸಿದರು. ಅವರ ಜೀವನ ಮತ್ತು ಸಾಧನೆಗಳು ಪ್ರತಿಯೊಬ್ಬ ಭಾರತೀಯರಿಗೆ ಆದರ್ಶಪ್ರಾಯರಾಗಿದ್ದರು ಎಂದು ತಿಳಿಸಿದರು.
ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಷ ಕಾಲೇಬಾಗ, ಡಾ. ರವಿ ಬಿರಾದಾರ, ಮಹಾದೇವಿ ಗೋಕಾಕ, ಜಯಶ್ರೀ ಭಾರತೆ, ವಿದ್ಯಾರಾಣಿ ತುಂಗಳ, ಶಬ್ಬೀರ ಜಾಗಿರದಾರ, ರಮೇಶ ಗುಬ್ಬೇವಾಡ, ಅಮೀತ ಚವಾಣ್, ದೇವಾನಂದ ಲಚ್ಯಾಣ, ಎಂ.ಬಿ. ಮೆಂಡೆಗಾರ, ವಿದ್ಯಾವತಿ ಅಂಕಲಗಿ, ಹನೀಫ ಮಕಾಂದಾರ, ಸುಜಾತಾ ಕಳ್ಳಿಮನಿ, ಆರತಿ ಶಹಾಪೂರ, ಅಪ್ಪು ಪೂಜಾರಿ, ಜಾಕೀರಹುಸೇನ ಮುಲ್ಲಾ, ಎಂ.ಎಂ. ಮುಲ್ಲಾ, ವಸಂತ ಹೊನಮೋಡೆ, ದೇಸು ಚವಾಣ್, ಸೋಮನಾಥ ಕಳ್ಳಿಮನಿ ಮತ್ತಿತರರಿದ್ದರು.