ಹೋರಿ ತಿವಿದು ಬಾಲಕ ಸಾವು

The injured boy died
Published on

ಹಿರೇಕೆರೂರ: ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಮಟ್ಟದ ಭಾರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ.

ಬ್ಯಾಡಗಿ ತಾಲೂಕಿನ ಮತ್ತೂರ ಗ್ರಾಮದ ಪ್ರಶಾಂತ ರಾಜನಹಳ್ಳಿ (16) ಮೃತಪಟ್ಟ ಬಾಲಕ. ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಅಂದು ಅರಳಿಕಟ್ಟಿ ಗ್ರಾಮದ ಮಂಜಪ್ಪ ಕನ್ನಮ್ಮನವರ ಎಂಬ ವ್ಯಕ್ತಿ ಮೃತಪಟ್ಟು, 18 ಜನ ಗಾಯಗೊಂಡಿದ್ದರು. ಇದರಲ್ಲಿ ಮೂವರು ಪರಿಸ್ಥಿತಿ ಗಂಭೀರವಾಗಿತ್ತು. ಈ ಪೈಕಿ ಪ್ರಶಾಂತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net