ಗಾಯಗೊಂಡಿದ್ದ ವ್ಯಕ್ತಿ ಸಾವು

crime
Published on

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕಿಯಿಂದ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇಲ್ಲಿಯ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾರೆ.

ನೂಲ್ವಿ ಕ್ರಾಸ್ ಹತ್ತಿರ ವಾಹನ ಡಿಕ್ಕಿಯಾಗಿದ್ದರಿಂದ ಆಟೋರಿಕ್ಷಾ ಚಾಲಕ, ರಜಾಟೌನ್ ನಿವಾಸಿ ನಜೀರ್ ಅಹ್ಮದ್ ಅತ್ತಾರ (54) ಗಾಯಗೊಂಡಿದ್ದರು. ಕೆಎಂಸಿಆರ್‌ಐಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ನಜೀರ ಅಹ್ಮದ್ ಪುತ್ರ ನೀಡಿದ ದೂರಿನನ್ವಯ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net