

ಹುಬ್ಬಳ್ಳಿ: ಮಂಟೂರ-ಬಂಡಿವಾಡ ಕ್ರಾಸ್‌ನಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆಗೆ ಸ್ಪಂದಿಸದೇ ಇಲ್ಲಿಯ ಕೆಎಂಸಿಆರ್‌ಐನಲ್ಲಿ ಮೃತಪಟ್ಟಿದ್ದಾರೆ.
ರಾಜೇಸಾಬ್ ಹುಸೇನಸಾಬ್ ಮುಲ್ಲಾ(63) ಮೃತರು. ನಡೆದುಕೊಂಡು ಹೋಗುತ್ತಿದ್ದಾಗ ವಾಹನದ ಡೋರ್ ಬಡಿದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಕೆಎಂಸಿಆರ್‌ಐಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.