ಪಾಡ್ದನಗಳು ಗ್ರಂಥ ರೂಪದಲ್ಲಿ ಬರಬೇಕು

blm-2
Published on

ಶಿರ್ವ: ಬಾಯಿಯಿಂದ ಬಾಯಿಗೆ ಹರಿದು ಬಂದ ಸತ್ ಸಂಪ್ರದಾಯ ಗೀತೆಗಳಾದ ಪಾಡ್ದನಗಳು ಈ ನಾಡಿನ ಜಾನಪದ ಇತಿಹಾಸ ತಿಳಿಸುತ್ತವೆ. ಪಾಣಾರ ಸಮುದಾಯ ಈ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಇದನ್ನು ಶಾಶ್ವತವಾಗಿ ಉಳಿಸುವ ಕಾರ್ಯ ನಡೆಯಬೇಕು. ಪಾಡ್ದಾನಗಳು ಗ್ರಂಥರೂಪದಲ್ಲಿ ಮುಂದಿನ ಪೀಳಿಗೆಗೆ ಸಿಗುವಂತಾಗಬೇಕು ಎಂದು ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಆರ್. ಹೇಳಿದರು.

ಮಂಗಳವಾರ ಪಾಣಾರ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಮೂಡುಬೆಳ್ಳೆ ಆಶ್ರಯದಲ್ಲಿ ಬೆಳ್ಳೆ ಕಾಡಬೆಟ್ಟು ಶ್ರೀ ಪಂಜಿರ್ಲಿ ದೈವಸ್ಥಾನದ ಪ್ರಾಂಗಣದಲ್ಲಿ ಮೂಡುಬೆಳ್ಳೆಯ ಹಿರಿಯ ಪಾಡ್ದನ ಹಾಡುಗಾರ್ತಿ ಅಪ್ಪಿ ಕೃಷ್ಣ ಪಾಣಾರ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಪ್ರಶಸ್ತಿ ಪ್ರದಾನ ಮಾಡಿದರು. ಮೂಡುಬೆಳ್ಳೆ ಪಾಣಾರ ಸಂಘದ ಅಧ್ಯಕ್ಷ ರಾಜು ಪಾಣಾರ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ, ಅಕಾಡೆಮಿಯ ವಲಯ ಸಂಯೋಜಕ ಡಾ.ಜಮೀರುಲ್ಲಾ ಶರೀಫ್, ಬೆಳ್ಳೆ ಗ್ರಾ.ಪಂ. ಅಧ್ಯಕ್ಷೆ ದಿವ್ಯಾ ವಿ.ಆಚಾರ್ಯ, ಪಾಣಾರ ಸಂಘದ ಗೌರವ ಅಧ್ಯಕ್ಷ ಸುಧಾಕರ ಪಾಣಾರ, ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ, ತಾಪಂ ಮಾಜಿ ಅಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಉದ್ಯಮಿ ವಿನ್ಸೆಂಟ್ ಫರ್ನಾಂಡಿಸ್, ಬೆಳ್ಳೆ ಸೊಸೈಟಿ ಅಧ್ಯಕ್ಷ ಶಿವಾಜಿ ಎಸ್.ಸುವರ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಸುಧಾಕರ ಪೂಜಾರಿ, ರಂಜನಿ ಹೆಗ್ಡೆ,ರಾಜೇಂದ್ರ ಶೆಟ್ಟಿ, ತಾಪಂ ಮಾಜಿ ಸದಸ್ಯೆ ಸುಜಾತಾ ಸುವರ್ಣ, ಪಳ್ಳಿ ಸೊಸೈಟಿ ನಿರ್ದೇಶಕ ದಯಾನಂದ ಶೆಟ್ಟಿ ಪಟೇಲ್‌ಮನೆ, ಪಾಣಾರ ಸಂಘ ಉಡುಪಿ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಪಡ್ಡಾಮ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಪಾಣಾರ ಸಂಘ ಜಿಲ್ಲಾ ಸಮಿತಿಯ ಸುಕೇಶ್, ಸಂಜೀವ ಪಡ್ಡಾಮ, ಗ್ರಾ.ಪಂ. ಸದಸ್ಯ ಗುರುರಾಜ್ ಭಟ್ ಉಪಸ್ಥಿತರಿದ್ದರು. ಬೆಳ್ಳೆ ಗ್ರಾ.ಪಂ. ಉಪಾಧ್ಯಕ್ಷ ಶಶಿಧರ ವಾಗ್ಲೆ ಸ್ವಾಗತಿಸಿದರು, ಅಶ್ವಿನ್ ಲಾರೆನ್ಸ್ ನಿರೂಪಿಸಿದರು.

ವಿವಿಧ ಸಂಘಗಳಿಂದ ಸನ್ಮಾನಅಪ್ಪಿ ಕೃಷ್ಣ ಪಾಣಾರ ಅವರನ್ನು ಬೆಳ್ಳೆ ಗ್ರಾ.ಪಂ., ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘ, ನವೋದಯ ಒಕ್ಕೂಟ, ಕೆನರಾ ಬ್ಯಾಂಕ್ ಮಧ್ವನಗರ ಶಾಖೆ, ಪಾಣಾರ ಯಾನೆ ನಲಿಕೆಯವರ ಜಿಲ್ಲಾ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪಾಣಾರ ಯಾನೆ ನಲಿಕೆಯವರ ಸಂಘದಿಂದ ಸಮುದಾಯಕ್ಕೆ ನೀಡುತ್ತಿರುವ ಬೆಂಬಲ ಹಾಗೂ ಸಹಕಾರಕ್ಕೆ ತಹಸೀಲ್ದಾರ್ ಡಾ.ಪ್ರತಿಭಾ ಆರ್., ಗ್ರಾಮ ಆಡಳಿತಾಧಿಕಾರಿ ಪ್ರದೀಪ್ ಕುಮಾರ್, ಗ್ರಾ.ಪಂ.ಉಪಾಧ್ಯಕ್ಷ ಶಶಿಧರ ವಾಗ್ಲೆ, ಗ್ರಾಮ ಸಹಾಯಕರಾಗಿ 32ವರ್ಷ ಸೇವೆ ನೀಡಿದ ನ್ಯಾನ್ಸಿ ಡಿಸೋಜ, ಸಮಾಜ ಸೇವಕ ಸುಂದರ, ಜಾನಪದ ವಿದ್ವಾಂಸ ಎಸ್.ಎ.ಕೃಷ್ಣಯ್ಯ, 30 ವರ್ಷದ ಬಳಿಕ ಪಿಯುಸಿ ಬರೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ ಸುನೀತಾ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.ಜಾನಪದ ಇಲ್ಲದ ಜಾಗವೇ ಇಲ್ಲ. ಜಾನಪದದಲ್ಲಿ ನಾಡು, ನುಡಿ, ಸಂಸ್ಕೃತಿ ಕಟ್ಟುವುದರಲ್ಲಿ ಸಾಹಿತ್ಯ ಉಳಿಸುವುದೇ ಅಕಾಡೆಮಿಯ ಕೆಲಸವಾಗಿದೆ. ಬೀದರ್‌ನಲ್ಲಿ ಜರುಗಿದ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ವಯೋ ಸಮಸ್ಯೆಯಿಂದ ಬರಲು ಸಾಧ್ಯವಾಗದ ಸಾಧಕರಿಗೆ ಅವರ ಮನೆಗೆ ಹೋಗಿ ಗೌರವಿಸಲಾಗುತ್ತಿದೆ. -ಗೊಲ್ಲಹಳ್ಳಿ ಶಿವಪ್ರಸಾದ್ - ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net