

ಬೆಳಗಾವಿ: ಜಿಲ್ಲೆಯ ಮಸೀದಿಯೊಂದರಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ.
ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ರಸಲು, ಪ್ರಕರಣ ಮುಚ್ಚಿ ಹಾಕಲು ಹಾಗೂ ಪೊಲೀಸ್ ಠಾಣೆಗೆ ದೂರು ಕೊಡದಂತೆ ಬೆದರಿಕೆ ಹಾಕಿದ ಮುಖಂಡರನ್ನು ವಿಚಾರಣೆ ನಡೆಸಲಾಗುತ್ತಿದೆ. ಮಸೀದಿಯ ಮೌಲ್ವಿ ಸೇರಿ ಇತರರ ವಿರುದ್ಧ ಕೇಸ್ ದಾಖಲಿಸಲು ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಮಸೀದಿ ಒಳಗೆ ಮತ್ತು ಹೊರಗೆ ಅಳವಡಿಸಿರುವ ಸಿಸಿ ಟಿವಿ ಕ್ಯಾಮರಾಗಳನ್ನು ಪರಿಶೀಲಿಸಲಾಗುತ್ತಿದ್ದು, ಕೃತ್ಯ ನಡೆದ ದಿನ ಹಾಗೂ ನಂತರ ದಿನಗಳಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಪದೇ ಪದೆ ಭೇಟಿ ಮಾಡಿ ರಾಜಿ ಸಂಧಾನ ಮಾಡಿರುವ ವ್ಯಕ್ತಿಗಳ ಹೆಸರನ್ನು ಸಂಗ್ರಹಿಸಲಾಗಿದೆ. ಯಾವ ಉದ್ದೇಶಕ್ಕಾಗಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಲಾಗಿದೆ. ದೂರು ಕೊಡಲು ತಡೆದಿರುವ ಕುರಿತು ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಬಂಧಿತ ಆರೋಪಿಯ ಕುಟುಂಬಸ್ಥರನ್ನೂ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಸೀದಿಯೊಂದರಲ್ಲಿ ಬಾಲಕಿ ಅತ್ಯಾಚಾರ ಪ್ರಕರಣದ ತನಿಖೆ ಮುಂದುವರಿದಿದ್ದು, ರಾಜಿ ಪಂಚಾಯಿತಿ ಮಾಡಿದವರು ಸೇರಿ ಸಂಬಂಧಿಸಿದರನ್ನು ವಿಚಾರಣೆ ನಡೆಸುತ್ತಿದ್ದೇವೆ. ಸಂತ್ರಸ್ತೆಯ ಕುಟುಂಬಸ್ಥರಿಗೆ ದೂರು ಕೊಡುವಂತೆ ಮನವೊಲಿಸುತ್ತಿದ್ದೇವೆ. ಡಾ.ಭೀಮಾಶಂಕರ ಗುಳೇದ, ಎಸ್ಪಿ