

ವಿಜಯವಾಣಿ ಸುದ್ದಿಜಾಲ ಉಡುಪಿ
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಪಾದರ ಜನ್ಮನಕ್ಷತ್ರದ ನಿಮಿತ್ತ ಶ್ರೀಕೃಷ್ಣ ಮಠದಲ್ಲಿ ಆಗಸ್ಟ್ 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಲಿದೆ.
ಶ್ರೀಕೃಷ್ಣನಿಗೆ ಅರ್ಪಣೆಗೊಳ್ಳಲಿರುವ ಮುತ್ತಿನ ಕವಚ-ಕಿರೀಟವನ್ನು ಭಾನುವಾರ ಸಂಜೆ (ಆ.3ರಂದು) ಸಾಲಂಕೃತ ಪಲ್ಲಕ್ಕಿಯಲ್ಲಿಟ್ಟು ವೈಭವದ ಮೆರವಣಿಗೆಯಲ್ಲಿ ಶ್ರೀಕೃಷ್ಣ ಮಠಕ್ಕೆ ತರಲಾಯಿತು. ಸುಗುಣೇಂದ್ರ ಶ್ರೀ, ಸುಶ್ರೀಂದ್ರ ಶ್ರೀ, ದಿವಾನ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಮಹಿತೋಷ ಆಚಾರ್ಯ ಇತರರಿದ್ದರು.