ಕೊಡವ ಸಾಹಿತ್ಯ ಅಕಾಡೆಮಿ ಸಾಹಿತ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ; ಪಾರ್ವತಿ ಅಪ್ಪಯ್ಯ

c42bb3f5-b723-4315-bd2d-77df39b7eb63
Published on

ಮಡಿಕೇರಿ: ಕೊಡವ ಸಾಹಿತ್ಯ ಅಕಾಡೆಮಿಯ ಮೂರು ವರ್ಷದ ಅವಧಿಯಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಒತ್ತು ನೀಡುವುದರ ಜತೆಗೆ ದಾಖಲೆಯ ೯೦ ಪುಸ್ತಕ ಬಿಡುಗಡೆ ಮಾಡಿದೆ ಎಂದು ಅಕಾಡೆಮಿ ಮಾಜಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೯೯೪ರಲ್ಲಿ ಅಕಾಡೆಮಿ ಸ್ಥಾಪನೆಯಾಗಿದ್ದು, ೨೫ ವರ್ಷಕ್ಕೆ ೧೬೦ ಪುಸ್ತಕ ಬಿಡುಗಡೆ ಮಾಡಿದೆ. ಇದರಲ್ಲಿ ಸಾಹಿತ್ಯ, ಸಂಶೋಧನೆ, ಸತಮಾನೋತ್ಸವ ಸಂಚಿಕೆ, ಪಠ್ಯಪುಸ್ತಕ ಸೇರಿದಂತೆ ಒಟ್ಟು ೮೮ ಪುಸ್ತಕವನ್ನು ತಮ್ಮ ಅವಧಿಯಲ್ಲಿ ಪ್ರಕಟಗೊಳಿಸಲಾಗಿದೆ. ಪ್ರಾಥಮಿಕ ಹಾಗೂ ಪದವಿಮಟ್ಟದ ಕಾಲೇಜು ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಕೊಡವ ಭಾಷೆ ಕಲಿಸಲಾಗುತ್ತಿದೆ. ಸರ್ಟಿಫಿಕೇಟ್, ಡಿಪ್ಲೋಮಾ, ಪಿ.ಜಿ. ಡಿಪ್ಲೋಮಾ ಕೋರ್ಸ್ ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಗೌರಮ್ಮ ಮಾದಮ್ಮಯ್ಯ, ಮಾಚಿಮಾಡ ಜಾನಕಿ ಮಾಚಯ್ಯ, ಬಬ್ಬಿರ ಸರಸ್ವತಿ, ಮಾಣಿಗೆರ ಶಂಭಯ್ಯ, ತೇಲಪಂಡ ಕವನ್ ಕಾರ್ಯಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net