

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಸೆ. 21ರಂದು ಸಂಜೆ 6 ಗಂಟೆಗೆ ಡಾ. ಪಾಟೀಲ ಪುಟ್ಟಪ್ಪ ಭವನದಲ್ಲಿ ಪ್ರೊ. ಸದಾನಂದ ಕನವಳ್ಳಿ ಸ್ಮರಣಾರ್ಥ ದತ್ತಿ ನಿಮಿತ್ತ ಪ್ರೊ. ಸದಾನಂದ ಕನವಳ್ಳಿಯವರ ಬಹುಮುಖ ವ್ಯಕ್ತಿತ್ವ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿದೆ.
ಬೆಳಗಾವಿ ಕೆಎಲ್ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಪ್ರಾಚಾರ್ಯ ಡಾ. ಹನುಮಂತ ಮೇಲಿನಮನಿ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಡಾ. ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.