ಗ್ರಂಥಾಲಯ ಭವಿಷ್ಯಕ್ಕೆ ದಾರಿದೀಪ

20
Published on

ಗ್ರಂಥಾಲಯಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪಗಳಾಗಿವೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಆರ್.ಎಚ್.ಪವಿತ್ರಾ ಹೇಳಿದರು.

ವಿದ್ಯಾರಣ್ಯಪುರಂನ ವಿದ್ಯಾರಣ್ಯ ಟ್ರಸ್ಟ್‌ನಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಪಾಲಕ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಂಥಾಲಯ ಜ್ಞಾನ ಭಂಡಾರದ ಗಣಿ ಇದ್ದಂತೆ. ಒಂದು ಉತ್ತಮ ಪುಸ್ತಕ ನೂರು ಸ್ನೇಹಿತರಿಗೆ ಸಮಾನವಾಗಿದ್ದು, ಸಂಪಾದಿಸಿದ ಹಣ, ಆಸ್ತಿ, ಐಶ್ವರ್ಯವನ್ನು ಯಾರು ಬೇಕಾದರೂ ಕಸಿದುಕೊಳ್ಳಬಹುದು, ಇಲ್ಲವೇ ಕಳೆದುಕೊಳ್ಳಬಹುದು. ಆದರೆ ಪುಸ್ತಕದಿಂದ ಪಡೆದ ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.

ಗ್ರಂಥಾಲಯಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗಿವೆ. ಸರ್ಕಾರಗಳು ಕೂಡ ಗ್ರಂಥಾಲಯಕ್ಕೆ ಹೆಚ್ಚಿನ ಪುಸ್ತಕಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪುಸ್ತಕ, ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿದ್ಯಾರಣ್ಯ ಟ್ರಸ್ಟ್ ಅಧ್ಯಕ್ಷ ಡಾ.ಜಿ.ವಿ.ರವಿಶಂಕರ್, ನಗರಪಾಲಿಕ ಸದಸ್ಯ ಮ.ವಿ.ರಾಮ್‌ಪ್ರಸಾದ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ವಿಕ್ರಮ ಅಯ್ಯಂಗಾರ್, ಸುಚೇಂದ್ರ, ಚಕ್ರಪಾಣಿ, ವಿದ್ಯಾ, ನಾಗಶ್ರೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net