

ಶಿರ್ವ: ನಮ್ಮ ಹಿರಿಯರು ಪ್ರಕೃತಿಯ ಜತೆಗೆ ಬೆಳೆದವರು. ಅಂದಿನ ಹಿರಿಯರ ಕಷ್ಟದ ಶ್ರಮ ಜೀವನ, ಸತ್ಯ, ನಿಷ್ಠೆ ಪ್ರಾವಾಣಿಕತೆ ಇಂದು ಮರೆಯಾಗುತ್ತಿದೆ. ಅವರ ಬದುಕು ನಮಗೆ ಆದರ್ಶವಾಗಿರಬೇಕು. ಹಿರಿಯರ ಕೃಷಿ ಸಂಸ್ಕೃತಿ, ಪ್ರಕೃತಿಯ ನಂಟು ನವಪೀಳಿಗೆಗೆ ಪರಿಚಯಿಸುವ ‘ಗಾದಂತ್ ಕ್ಹೇಳ್ ಮೇಳ್’ ಇದೊಂದು ಅರ್ಥಪೂರ್ಣ ಕಾರ್ಕ್ರಮ ಎಂದು ಬೆಂಗಳೂರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ ಎಳ್ಳಾರೆ ಸದಾಶಿವ ಪ್ರಭು ಹೇಳಿದರು.
ಬಂಟಕಲ್ಲು ರಾಜಾಪುರ ಸಾರಸ್ವತ ಸೇವಾ ವೃಂದದ ಆಶ್ರಯದಲ್ಲಿ ಹಾಗೂ ಶ್ರೀ ದುರ್ಗಾ ಮಹಿಳಾ ವೃಂದದ ಸಹಭಾಗಿತ್ವದಲ್ಲಿ ಸಡಂಬೈಲು ಅನಂತರಾಮ ವಾಗ್ಲೆ ಎಂಬುವರ ದೊಡ್ಡ ಗದ್ದೆಯಲ್ಲಿ ಭಾನುವಾರ ನಡೆದ 8ನೇ ವರ್ಷದ ‘ಗಾದಂತ್ ಕ್ಹೇಳ್ ಮೇಳ್’ ಕೆಸರು ಗದ್ದೆ ಕ್ರೀಡೋತ್ಸವದ ಸವಾರೋಪದಲ್ಲಿ ಮಾತನಾಡಿದರು.
ಪ್ರಗತಿಪರ ಕೃಷಿಕೆ ಸಡಂಬೈಲು ಹೆಬ್ಬಾಗಿಲು ಸುನೀತಾ ಕೃಷ್ಣ ವಾಗ್ಲೆ, ಕೃಷಿಕರು ಹಾಗೂ ಇನ್ನಂಜೆ ಎಸ್‌ವಿಎಚ್ ಪಪೂ ಪೂ.ಕಾಲೇಜಿನ ಪ್ರಾಂಶುಪಾಲ ಕುಂಜರ್ಗ ರಾಜೇಂದ್ರ ಪ್ರಭು ಅವರನ್ನು ಸನ್ಮಾನಿಸಲಾಯಿತು.
ಮಣಿಪಾಲ ಸಾರಸ್ವತ ಸೌಹಾರ್ದ ಸಹಕಾರಿ ಸಂ ಅಧ್ಯಕ್ಷ ವಾಸುದೇವ ಕೃಷ್ಣ ನಾಯಕ್ ಸ್ಪರ್ಧಾ ವಿಜೇತರಿಗೆ ಬಹುವಾನ ವಿತರಿಸಿದರು.
ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಳ ಆಡಳಿತ ಮೊಕ್ತೇಸರ ಜಯರಾಮ ಪ್ರಭು ಗಂಪದ ಬೈಲು, ಉದ್ಯಮಿ ರಾಮಚಂದ್ರ ನಾಯಕ್ ಪಡುಬೆಳ್ಳೆ, ಗದ್ದೆಯ ಯಜವಾನ ಅನಂತರಾಮ ವಾಗ್ಲೆ, ಆರ್‌ಎಸ್‌ಬಿ ಸೇವಾ ವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್, ಶ್ರೀ ದುರ್ಗಾ ಮಹಿಳಾ ವೃಂದದ ಅಧ್ಯಕ್ಷೆ ಸುನೀತಾ ದೇವೇಂದ್ರ ನಾಯಕ್, ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ, ಸೇವಾ ವೃಂದದ ಕಾರ್ಯದರ್ಶಿ ವಿಶ್ವನಾಥ ಬಾಂದೇಲ್ಕರ್, ಬೆಳ್ಳೆ ಗ್ರಾ.ಪಂ. ಉಪಾಧ್ಯಕ್ಷ ಶಶಿಧರ ವಾಗ್ಲೆ ಗದ್ದೆಗೆ ಹಾಲು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶೇಷ ಆಕರ್ಷಣೆಯಾಗಿ ಕೆಸರುಗದ್ದೆಯಲ್ಲಿ ಮೂಡುಬೆಳ್ಳೆ ಜಡ್ಡು ಉಮೇಶ್ ನಾಯಕ್ ಅವರ ಕಂಬಳದ ಕೋಣಗಳ ಓಟ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಮೂಡುಬೆಳ್ಳೆ ಜಡ್ಡು ಉಮೇಶ್ ನಾಯಕ್ ಅವರನ್ನು ಸನ್ಮಾನಿಸಲಾಯಿತು.
ಪ್ರಧಾನ ಸಂಟಕ ಕೆ.ಆರ್.ಪಾಟ್ಕರ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ವಿಶ್ವನಾಥ್ ಬಾಂದೇಲ್ಕರ್ ಸ್ಪರ್ಧಾ ವಿಜೇತರನ್ನು ಪರಿಚಯಿಸಿದರು. ದೇವದಾಸ್ ಪಾಟ್ಕರ್ ನಿರೂಪಿಸಿದರು.