ಲಾರಿ ಪಲ್ಟಿಯಾಗಿ ಚಾಲಕನಿಗೆ ಗಾಯ

Lorry
Published on

ಯಲ್ಲಾಪುರ: ಲಾರಿ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ತಾಲೂಕಿನ ಅರಬೈಲ್ ಬಳಿ ನಡೆದಿದೆ.

ಜಾರ್ಖಂಡ್ ರಾಜ್ಯದ ಹಜಾರೆಬಾಗಿನ ಸೌರಭಕುಮಾರ ನಿರಂಜನ ರಾಮ ಗಾಯಗೊಂಡ ಚಾಲಕ. ಹುಬ್ಬಳ್ಳಿ ಕಡೆಯಿಂದ ಕಾರವಾರ ಕಡೆಗೆ ಸಿಮೆಂಟ್ ತುಂಬಿಕೊಂಡು ಹೊರಟಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಅರಬೈಲ್ ಹನುಮಂತ ದೇವಸ್ಥಾನದ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಲಾರಿಯಲ್ಲಿದ್ದ ಸಿಮೆಂಟ್ ಚೀಲಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗಾಯಾಳುವನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net