

ಯಲ್ಲಾಪುರ: ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಬಳಗಾರ ಕ್ರಾಸ್ ಬಳಿ ನಡೆದಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಖಾಲಿ ಕಂಟೇನರ್ ಲಾರಿ ಆರತಿಬೈಲ್ ಘಟ್ಟದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಜಖಂಗೊಂಡಿದೆ.
ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.